ಬೆಂಗಳೂರು: ಮನೆಯ ಎದುರು ನಿಲುಗಡೆ ಮಾಡಿದ್ದ ಬೈಕ್ ಹಾಗೂ ಬೀಗ ಹಾಕಿರುವ ಮನೆಗಳ ಬಾಗಿಲು ಒಡೆದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಸೈಯದ್ ಅಹ್ಮದ್(32) ಬಂಧಿತ.

ಆರೋಪಿಯಿಂದ ₹29.55 ಲಕ್ಷ ಮೌಲ್ಯದ 305 ಗ್ರಾಂ ಚಿನ್ನಾಭರಣ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಆರೋಪಿ ಕಳವು ಮಾಡಿದ್ದ ಬೈಕ್ನಲ್ಲಿ ನಗರದಲ್ಲಿ ಸುತ್ತಾಟ ನಡೆಸುತ್ತಿದ್ದ. ಬೀಗ ಹಾಕಿರುವ ಮನೆಗಳನ್ನು ಗುರುತಿಸುತ್ತಿದ್ದ. ರಾತ್ರಿ ವೇಳೆ ಆ ಮನೆಗೆ ಬಂದು ಕಬ್ಬಿಣದ ರಾಡ್ನಿಂದ ಬಾಗಿಲು ಒಡೆದು ಮನೆಯೊಳಗೆ ನುಗ್ಗಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಎಂದು ಪೊಲೀಸರು ಹೇಳಿದರು.

ಠಾಣಾ ವ್ಯಾಪ್ತಿಯ ಮನೆಯೊಂದರ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ. ದ್ವಿಚಕ್ರ ವಾಹನ ಮಾಲೀಕರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಪಟ್ಟೇಗಾರ ಪಾಳ್ಯದಲ್ಲಿ ಪೊಲೀಸರು ಗಸ್ತು ನಡೆಸುವಾಗ ಆರೋಪಿ ಬೈಕ್ನಲ್ಲಿ ತೆರಳುತ್ತಿದ್ದ. ಆತನನ್ನು ತಡೆದು ಪ್ರಶ್ನಿಸಿದಾಗ ಗೊಂದಲದ ಹೇಳಿಕೆ ನೀಡಿದ್ದ. ಬಳಿಕ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಮನೆ ಕಳ್ಳತನ ಮತ್ತು ಬೈಕ್ ಕಳವು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಆರೋಪಿಯ ಮಾಹಿತಿಯ ಮೇರೆಗೆ ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಚಿನ್ನಾಭರಣ ಅಂಗಡಿಗಳಲ್ಲಿ ಮಾರಾಟ ಮಾಡಿದ್ದ 305 ಗ್ರಾಂ ಚಿನ್ನಾಭರಣ ಮತ್ತು ಆತನ ಬಳಿಯಿದ್ದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಬಂಧನದಿಂದ ನಗರದ ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಏಳು ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.