ಬೆಂಗಳೂರು: ಭೂ ವ್ಯಾಜ್ಯ, ದ್ವೇಷ, ಹಣಕಾಸು, ಪ್ರೀತಿ, ಹಠಾತ್ ಜಗಳದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ನಾಲ್ಕು ತಿಂಗಳಲ್ಲಿ 65 ಕೊಲೆ ಪ್ರಕರಣಗಳು ನಡೆದಿವೆ.

2023ಕ್ಕೆ ಹೋಲಿಸಿದರೆ 2024ರಲ್ಲಿ ಕೊಲೆ ಪ್ರಕರಣಗಳ ಶೇಕಡ 16ರಷ್ಟು ಕಡಿಮೆಯಾಗಿದೆ. 2023ರಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ದಾಖಲಾದ 537 ಪ್ರಕರಣಗಳ ಪೈಕಿ, 526 ಪ್ರಕರಣಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ, ಹಲ್ಲೆ, ದರೋಡೆ ಪ್ರಕರಣಗಳ ಜತೆಗೆ ಹಣಕಾಸು ಹಾಗೂ ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಗಳಲ್ಲಿ ಕೊಲೆ ಪ್ರಕರಣಗಳು ವರದಿಯಾಗುತ್ತಿವೆ.

‘ಭೂ ವ್ಯಾಜ್ಯ, ಹಣಕಾಸು ಹಾಗೂ ಪ್ರೀತಿಯ ವಿಚಾರಕ್ಕೆ ನಡೆಯುವ ಜಗಳಗಳು ಕೊಲೆಯಲ್ಲಿ ಅಂತ್ಯಗೊಳುತ್ತಿವೆ. ಇಂತಹ ಪ್ರಕರಣಗಳನ್ನು ತಡೆಗಟ್ಟುವುದು ಕಷ್ಟಸಾಧ್ಯವಾಗಿದೆ. ಅಲ್ಲದೇ, ದ್ವೇಷದ ಕಾರಣಕ್ಕೆ ವ್ಯಕ್ತಿಯ ವಿರುದ್ಧ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆಗಳೂ ನಡೆದಿವೆ. ಪ್ರೀತಿಯ ವಿಚಾರ, ಮಹಿಳೆಯೊಬ್ಬರೊಂದಿಗೆ ಸಲುಗೆ, ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಗಳೂ ದಾಖಲಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನಿನ ಮೇಲೆ ಹೊರ ಬಂದು ನ್ಯಾಯಾಲಯಕ್ಕೆ ವಿಚಾರಣೆಗೆ ಗೈರಾಗುವ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಇವರು ಸಹ ಅಪರಾಧ ಕೃತ್ಯಗಳಲ್ಲಿ ಮತ್ತೆ ಭಾಗಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ’ ಎಂದರು.

‘ಪೊಲೀಸ್ ಸಿಬ್ಬಂದಿ, ಹೊಯ್ಸಳ ವಾಹನ ಗಸ್ತು ಹೆಚ್ಚಳ, ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಹಳೆಯ ಪ್ರಕರಣದ ಆರೋಪಿಗಳ ಬಂಧನ, ರೌಡಿಗಳ ಮೇಲೆ ನಿಗಾ ಹಾಗೂ ಸಾರ್ವಜನಿಕರಿಗೆ ನಿರಂತರ ಜಾಗೃತಿ ಮೂಡಿಸುವ ಮೂಲಕ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.

ನಗರದಲ್ಲಿ ದಾಖಲಾಗಿರುವ ಕೊಲೆ ಪ್ರಕರಣಗಳಲ್ಲಿ ಪೈಕಿ ಕೆಲವು ನಾಗರಿಕರನ್ನು ಬೆಚ್ಚಿಬೀಳಿಸಿವೆ. ಮಗಳ ಜತೆ ಸಲುಗೆಯಿಂದ ಇರಬೇಡ ಎಂದು ಬುದ್ಧಿ ಹೇಳಿದ ಯುವತಿಯ ತಂದೆ ಸೈಯದ್ ಅಸ್ಲಮ್ (60) ಅವರನ್ನು ಕೆಲಸಗಾರನೇ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಸೂರ್ಯ ಪ್ರಕಾಶ್ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದರು.

ಸೈಯದ್ ಅಸ್ಲಮ್ ಅವರು ತನ್ನ ಸಹೋದರನ ಟಿಂಬರ್ ಅಂಗಡಿಯ ಮೇಲ್ವಿಚಾರಣೆ ಮಾಡುತ್ತಿದ್ದರು. ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಸೈಯದ್ ಮಗಳೊಂದಿಗೆ ಸಲುಗೆಯಿಂದ ಇರುತ್ತಿದ್ದ. ‘ಮಗಳ ತಂಟೆಗೆ ಬರಬೇಡ’ ಎಂದು ಆರೋಪಿಗೆ ಎಚ್ಚರಿಸಿದ್ದರು. ಪಾನಮತ್ತನಾಗಿ ಅಂಗಡಿ ಬಳಿ ಬಂದಿದ್ದ ಆರೋಪಿ, ಅಂಗಡಿಯಲ್ಲಿದ್ದ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದ.

ಮತ್ತೊಂದು ಪ್ರಕರಣದಲ್ಲಿ ಮದ್ಯ ಸೇವನೆಗೆ ಹಣ ನೀಡಲು ನಿರಾಕರಿಸಿದ 82 ವರ್ಷದ ತಾಯಿಯನ್ನು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಮಗ ಸಾಯಿಸಿದ್ದ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಮಗನನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.