ಪ್ರಯಾಣಿಕರು ಕೇಳಿದ ಸ್ಥಳಕ್ಕೆ ಬಾಡಿಗೆಗೆ ತೆರಳಲು ನಿರಾಕರಣೆ, ದುಬಾರಿ ಬಾಡಿಗೆ, ಕರ್ಕಶವಾಗಿ ಶಬ್ದ ಮಾಡುವ ಸೈಲೆನ್ಸರ್ ಅಳವಡಿಕೆ, ಟ್ರಾಫಿಕ್ ಸಿಗ್ನಲ್ ದಾಟಿ ನಿಯಮ ಉಲ್ಲಂಘನೆ, ಏಕಮುಖ ಸಂಚಾರ ರಸ್ತೆಯಲ್ಲಿ ವಾಹನ ಚಾಲನೆ, ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆ, ದ್ವಿಚಕ್ರ ವಾಹನದಲ್ಲಿ ಮೂವರ ಸವಾರಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಸುರಕ್ಷತಾ ಬೆಲ್ಟ್ ಧರಿಸದೆ ವಾಹನ ಚಾಲನೆ, ನಿಗದಿಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವುದು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸವಾರಿ ಮಾಡಿ ನಿಯಮ ಉಲ್ಲಂಘಿಸುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.