ಬೆಂಗಳೂರು: ಜಯನಗರ ಬಳಿಯ ‘ಉಡುಪಿ ಹಬ್’ ಹೋಟೆಲ್‌ಗೆ ನುಗ್ಗಿದ್ದ ಇಬ್ಬರು ಗಲಾಟೆ ಮಾಡಿದ್ದಾರೆ. ಹೋಟೆಲ್‌ನಲ್ಲಿದ್ದ ಗಾಜಿನ ಟೇಬಲ್‌ಗೆ ಕಲ್ಲಿನಿಂದ ಹೊಡೆದು ಪುಡಿ ಪುಡಿ ಮಾಡಿದ್ದಾರೆ. ಆರೋಪಿಗಳ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ ಯಾಗಿದೆ.
‘ಬೆಂಗಳೂರು ಬಂದ್ ಇದೆ. ಬಾಗಿಲು ಬಂದ್ ಮಾಡಿ’ ಎಂದು ಕೂಗಾಡುತ್ತಿದ್ದ ಇಬ್ಬರು, ಏಕಾಏಕಿ ಹೋಟೆಲ್‌ಗೆ ನುಗ್ಗಿ ಕೃತ್ಯ ಎಸಗಿ ಪರಾರಿಯಾಗಿದ್ದರು. ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಆರೋಪಿಗಳಾದ ಶಿವ ಹಾಗೂ ವಿಶ್ವ ಅವರನ್ನು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರು ಸ್ಥಳೀಯ ಶಾಸಕರ ಜೊತೆ ಓಡಾಡಿಕೊಂಡಿದ್ದರೆಂದು ಗೊತ್ತಾಗಿದೆ.
‘ಘಟನೆ ಬಗ್ಗೆ ಹೋಟೆಲ್ ಮಾಲೀಕರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಇಬ್ಬರು ವಶಕ್ಕೆ ಪಡೆಯಲಾಗಿದೆ. ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ದಕ್ಷಿಣ ವಿಭಾಗದ ಡಸಿಪಿ ರಾಹುಲ್‌ಕುಮಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.