ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಐದು ನಗರ ಪಾಲಿಕೆಗಳಿಗೆ ಕೂಡಲೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷ ಶುಕ್ರವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.

ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಮಾತನಾಡಿ, ‘ಅಂದಿನ ಬಿಜೆಪಿ ಸರ್ಕಾರವು ಬಿಬಿಎಂಪಿ ಚುನಾವಣೆ ಮುಂದೂಡಲು ನಾನಾ ಕಸರತ್ತನ್ನು ನಡೆಸಿತ್ತು. ಕೆಎಂಸಿ ಕಾಯ್ದೆಯನ್ನೇ ರದ್ದುಪಡಿಸಿ ಬಿಬಿಎಂಪಿ 2020 ಕಾಯ್ದೆಯನ್ನು ರಚಿಸುವ ಮೂಲಕ ಆಡಳಿತಾಧಿಕಾರಿಗಳನ್ನು ನೇಮಿಸಿ ಭ್ರಷ್ಟಾಚಾರದಲ್ಲಿ ಮುಳುಗಿಸಿತ್ತು’ ಎಂದು ಆರೋಪಿಸಿದರು.

ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ‘ನಗರದ ನಾಗರಿಕರು ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಚುನಾವಣೆಯನ್ನೇ ಮುಂದೂಡಲು ಹೊರಟಿರುವುದು ನಾಗರಿಕ ಸಮಾಜ ಸಹಿಸುವುದಿಲ್ಲ. ಚುನಾವಣೆ ನಡೆಸದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದ್ದಾರೆ.

ಆಶಯ: ‘ರಾಜ್ಯ ಚುನಾವಣಾ ಆಯೋಗ ಜೂನ್ನಲ್ಲಿ ನಗರ ಪಾಲಿಕೆಗಳ ಚುನಾವಣೆಯನ್ನು ನಡೆಸುವುದಾಗಿ ಹೇಳಿರುವುದು ಸ್ವಾಗತಾರ್ಹ. ನಿಗದಿತ ವೇಳಾಪಟ್ಟಿಯಂತೆಯೇ ಚುನಾವಣೆ ನಡೆದರೆ, ಬಹಳ ವರ್ಷಗಳಿಂದ ಬಾಕಿ ಉಳಿದಿರುವ ಸ್ಥಳೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತೆ ಸ್ಥಾಪನೆಯಾಗಲಿದೆ. ಜನರಿಗೆ ಹೆಚ್ಚು ಅನುಕೂಲ ಆಗಲಿದೆ’ ಎಂದು ಬೆಂಗಳೂರು ನವನಿರ್ಮಾಣ ಪಕ್ಷದ ಸ್ಥಾಪಕರಾದ ಶ್ರೀಕಾಂತ್ ನರಸಿಂಹನ್ ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-1358606192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.