ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: 11 ತಿಂಗಳಿನಲ್ಲಿ 4,499 ಅಪಘಾತ, 823 ಮಂದಿ ಸಾವು

Published 17 ಡಿಸೆಂಬರ್ 2023, 15:36 IST
Last Updated 17 ಡಿಸೆಂಬರ್ 2023, 15:36 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ನವೆಂಬರ್‌ವರೆಗೆ 4,499 ಅಪಘಾತಗಳು ಸಂಭವಿಸಿದ್ದು, 823 ಮಂದಿ ಮೃತಪಟ್ಟಿದ್ದಾರೆ.

ಅಪಘಾತಗಳ ಅಂಕಿ– ಅಂಶಗಳನ್ನು ಸಂಚಾರ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕಳೆದ ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಅಪಘಾತಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿದೆ.

‘ಬಳ್ಳಾರಿ ರಸ್ತೆ, ಮೈಸೂರು ರಸ್ತೆ, ಹಳೇ ಮದ್ರಾಸ್ ರಸ್ತೆಗಳಲ್ಲಿ ಅಪಘಾತ ಪ್ರಮಾಣ ಹೆಚ್ಚಿದೆ. ಹೊರವರ್ತುಲ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಬೈಕ್ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. ಅತೀ ವೇಗದ ಚಾಲನೆ, ನಿರ್ಲಕ್ಷ್ಯ ಹಾಗೂ ಸಂಚಾರ ನಿಯಮ ಉಲ್ಲಂಘನೆಯೇ ಅಪಘಾತಕ್ಕೆ ಕಾರಣ ಎನ್ನುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT