ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಪ್ರತ್ಯೇಕ ಅಪಘಾತಗಳಲ್ಲಿ ಮೂವರ ಸಾವು

Published 28 ಫೆಬ್ರುವರಿ 2024, 16:01 IST
Last Updated 28 ಫೆಬ್ರುವರಿ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಹಾಗೂ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ– ಹೊಸೂರು ರಸ್ತೆ ಮೇಲ್ಸೇತುವೆಯಲ್ಲಿ ನಡೆದ ಅಪಘಾತದಲ್ಲಿ ಮಡಿವಾಳ ಕೆರೆ ಸಮೀಪದ ನಿವಾಸಿಗಳಾದ ಸವಾರ ಅಭಿನಂದನ್ (25) ಮತ್ತು ಹಿಂಬದಿ ಕೂತಿದ್ದ ದೀಕ್ಷಾ (25) ಮೃತಪಟ್ಟಿದ್ದಾರೆ. ಇಬ್ಬರೂ ಸ್ನೇಹಿತರು. ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ.

‘ಅಭಿನಂದನ್ ಆನ್‌ಲೈನ್ ವ್ಯವಹಾರ ನಡೆಸುತ್ತಿದ್ದರೆ, ದೀಕ್ಷಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ದ್ವಿಚಕ್ರ ವಾಹನದಲ್ಲಿ ಕೋನಪ್ಪ ಅಗ್ರಹಾರ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ- ಹೊಸೂರು ಮೇಲುಸೇತುವೆಯಲ್ಲಿ ತಮಿಳುನಾಡು ಕಡೆಗೆ ಹೋಗುತ್ತಿದ್ದರು. ಆಗ ಹಿಂದಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.

ಸಹಾಯಕ ಸಾವು

ವಾಹನ (ಬಹುಚಕ್ರದ ವಾಹನ) ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕನ ಸಹಾಯಕ ಮೃತಪಟ್ಟಿದ್ದು, ಮೇಲ್ವಿಚಾರಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಹಾರ ಮೂಲದ ವಿಜಯ್ ಉಪಾಧ್ಯಾಯ (25) ಮೃತಪಟ್ಟವರು. ಮೋಹನ್ ಚಂದ್ರ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ನೈಸ್ ರಸ್ತೆಯಲ್ಲಿ ಮಾಗಡಿ ರಸ್ತೆ ಟೋಲ್ ಕಡೆಯಿಂದ ತುಮಕೂರು ರಸ್ತೆ ಕಡೆಗೆ ತೆರಳುವ ಮಾರ್ಗ ಮಧ್ಯೆ ಬುಧವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT