ಬೆಂಗಳೂರು: ಮುಂದಿನ ವರ್ಷದ ಶಂಕರ ಜಯಂತಿಗೆ ಮುನ್ನ, ಮಹಾಲಕ್ಷ್ಮಿ ಲೇಔಟ್ನಲ್ಲಿ ಆದಿ ಶಂಕರಾಚಾರ್ಯರ ಬೃಹತ್ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ಕೆ. ಗೋಪಾಲಯ್ಯ ತಿಳಿಸಿದರು.

ಶಂಕರ ಜಯಂತಿ ಅಂಗವಾಗಿ ಮಹಾಲಕ್ಷ್ಮಿಪುರ ಬ್ರಾಹ್ಮಣ ಮಹಾಸಭಾ ಏರ್ಪಡಿಸಿದ್ದ ತತ್ವಜ್ಞಾನಿಗಳ ದಿನಾಚರಣೆಯಲ್ಲಿ ಮಾತನಾಡಿ, ‘ಪ್ರತಿಮೆ ನಿರ್ಮಾಣಕ್ಕಾಗಿ ಜಾಗ ಗುರುತಿಸ ಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ನೀಡುವ ಅನುದಾನ ಬಳಸಿ ಪ್ರತಿಮೆ ನಿರ್ಮಿಸಿ, ಆಧ್ಯಾತ್ಮಿಕ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗುವುದು’ ಎಂದರು.

ವೇದ ವಿದ್ವಾಂಸರಾದ ರಾಮಚಂದ್ರ ಭಟ್ ಕೋಟೆ ಮನೆ, ಉಮಾಕಾಂತ ಭಟ್ ಕೆರೆಕೈ, ಮಹಾಬಲೇಶ್ವರ ಭಟ್, ತಿರುಪತಿ ವಿಶ್ವ ವಿದ್ಯಾಲಯದ ವೇದಾಂತ ವಿಭಾಗದ ಮುಖ್ಯಸ್ಥ ಕೆ. ಗಣಪತಿ ಭಟ್, ಚಂದ್ರಕಾಂತ ಸೋಮಯಾಜಿ ಅವರಿಗೆ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಶಂಕರ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು. ಸಮಾಜ ಸೇವಕರಾದ ರಾಜೇಶ್ವರಿ ರಮೇಶ್ ಹಾಗೂ ಶೇಷಗಿರಿರಾವ್ ದಂಪತಿಗಳನ್ನು ಸನ್ಮಾನಿಸಲಾಯಿತು.

ಆದಿ ಶಂಕರಾಚಾರ್ಯರ ಕುರಿತ ಸಂಕ್ಷಿಪ್ತ ವಿವರ ನೀಡುವ ಪುಸ್ತಕವನ್ನು ಜನಾರ್ಪಣೆ ಮಾಡಲಾಯಿತು. ಮಹಾಸಭಾದ ಅಧ್ಯಕ್ಷ ಬಿ.ಎಸ್. ರಾಘವೇಂದ್ರ ಭಟ್, ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮಲ್ಹಾರಿ ರಾವ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-4-1497394325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.