ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಗಾಳಿಯ ಗುಣಮಟ್ಟ ‘ಸಮಾಧಾನಕರ’

ಮಾಲಿನ್ಯ ಹೆಚ್ಚಾದಲ್ಲಿ ಕಾಡಲಿದೆ ಉಸಿರಾಟ, ಶ್ವಾಸಕೋಶ ಸಂಬಂಧಿ ಸಮಸ್ಯೆ
Last Updated 9 ಡಿಸೆಂಬರ್ 2020, 21:27 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕೋವಿಡ್‌ನಿಂದಾಗಿ ನಗರದಲ್ಲಿ ವಾಹನ ಸಂಚಾರ ವಿರಳವಾದ ಪರಿಣಾಮ ಈ ಬಾರಿ ಚಳಿಗಾಲದಲ್ಲಿಯೂ ಗಾಳಿಯ ಗುಣಮಟ್ಟವು ನಗರದ ಬಹುತೇಕ ಪ‍್ರದೇಶಗಳಲ್ಲಿ ‘ಸಮಾಧಾನಕರ’ ಪ್ರಮಾಣವನ್ನು ಕಾಯ್ದುಕೊಂಡಿದೆ.

ಚಳಿಗಾಲದಲ್ಲಿ ತಾಪಮಾನ ಕಡಿಮೆಯಾಗಿ, ತೇವಾಂಶ ಹೆಚ್ಚುವುದರಿಂದ ದೂಳಿನ ಕಣಗಳು ಆಕಾಶಕ್ಕೆ ಹೋಗದೆ ತಳಮಟ್ಟದಲ್ಲೇ ಗಾಳಿಯಲ್ಲಿ ತೇಲಾಡುತ್ತಿರುತ್ತವೆ. ಜೋರಾದ ಗಾಳಿ ಬೀಸಿದಾಗ ಈ ದೂಳಿನ ಕಣಗಳು ಹರಡಿ, ಹೆಚ್ಚು ವಾಯುಮಾಲಿನ್ಯ ಉಂಟಾಗಲು ಕಾರಣವಾಗುತ್ತವೆ. ಹೀಗಾಗಿ ಚಳಿಗಾಲದಲ್ಲಿ ಪ್ರತಿ ವರ್ಷ ಗಾಳಿಯ ಗುಣಮಟ್ಟದ ಸೂಚ್ಯಂಕವು (ಎಕ್ಯುಐ) ವ್ಯತ್ಯಯವಾಗಿ, ಮಾಲಿನ್ಯ ಕಾರಕ ಕಣಗಳು ಹೆಚ್ಚುತ್ತಿದ್ದವು.

ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದ ಬಳಿಕ ಮುಚ್ಚಲ್ಪಟ್ಟಿದ್ದ ಬಹುತೇಕ ಖಾಸಗಿ ಕಂಪನಿಗಳು ಬಾಗಿಲು ತೆರೆದಿಲ್ಲ. ಶಾಲೆಗಳು ಕೂಡ ಪ‍್ರಾರಂಭವಾಗಿಲ್ಲ. ಇದರಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದೆ. ಕಟ್ಟಡಗಳು ಹಾಗೂ ರಸ್ತೆಗಳ ಕಾಮಗಾರಿಗಳ ವೇಗವೂ ಕುಂಠಿತವಾಗಿದೆ. ಕೈಗಾರಿಕಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿದ ಕಾರಣದಿಂದ ಕೂಡ ಈ ಬಾರಿ ಮಾಲಿನ್ಯದ ಪ್ರಮಾಣ ತಗ್ಗಿದೆ.

ಕಳೆದ ವರ್ಷ ಚಳಿಗಾಲದ ಅವಧಿಯಲ್ಲಿ ಹೆಬ್ಬಾಳ, ಜಯನಗರ, ನಿಮ್ಹಾನ್ಸ್, ಸೆಂಟ್ರಲ್ ಸಿಲ್ಕ್‌ ಬೋರ್ಡ್, ನಗರದ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲ ದಿನಗಳು ಗಾಳಿಯ ಗುಣಮಟ್ಟದ ಸೂಚ್ಯಂಕ 100ರ ಗಡಿ ದಾಟಿದ್ದವು. ಆದರೆ, ಈ ಬಾರಿ ಬಹುತೇಕ ಕಡೆ ಎಕ್ಯುಐ ಪ್ರಮಾಣ 50ರ ಆಸುಪಾಸಿನಲ್ಲಿದೆ.

‘ಗಾಳಿಯ ಗುಣಮಟ್ಟದ ಸೂಚ್ಯಂಕವು 50ರ ಒಳಗಡೆಯಿದ್ದಲ್ಲಿ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳುಕಾಣಿಸಿಕೊಳ್ಳುವುದಿಲ್ಲ. ಎಕ್ಯುಐ 51ರಿಂದ 100ರ ಒಳಗಡೆ ಇದ್ದಲ್ಲಿ ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. 101ರಿಂದ 200ರ ಗಡಿಯ ನಡುವೆ ಇದ್ದಲ್ಲಿ ಶ್ವಾಸಕೋಶ, ಹೃದಯ ಕಾಯಿಲೆಗಳು ಕೂಡ ಬರಬಹುದು. ಕಳಪೆ ಮಟ್ಟ ತಲುಪಿದಲ್ಲಿ ಉಸಿರಾಟದ ಮತ್ತು ಶ್ವಾಸಕೋಶದ ಸಮಸ್ಯೆಗಳು ಸಂಕೀರ್ಣ ಸ್ವರೂಪ ಪಡೆದುಕೊಳ್ಳಲಿವೆ. ತೀವ್ರವಾಗಿ ಹದಗೆಟ್ಟಲ್ಲಿ ಆರೋಗ್ಯವಂತರೂ ಅಸ್ವಸ್ಥರಾಗುತ್ತಾರೆ’ ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT