ಬೆಂಗಳೂರು: ಬೆಂಗಳೂರಿನ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಹೆಸರಿನ ಸುಂದರ ಹಾಗೂ ಬೃಹತ್ ಕಲಾತ್ಮಕ ಶಿಲ್ಪವನ್ನು ಲೋಕಾರ್ಪಣೆಗೊಳಿಸಲಾಯಿತು.

ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಸಹಯೋಗದಲ್ಲಿ ಟರ್ಮಿನಲ್-2ರ ಮುಂಭಾಗದಲ್ಲಿ ಈ ಕಲಾಕೃತಿಯನ್ನು ಸ್ಥಾಪಿಸಲಾಗಿದೆ. ಸ್ಪೇನ್ನ ಕಲಾವಿದ ಜೌಮೆ ಪ್ಲೆನ್ಸಾ ಅವರ ಕಲ್ಪನೆಯಲ್ಲಿ ಈ ಶಿಲ್ಪವು ಮೂಡಿ ಬಂದಿದ್ದು, ಪ್ರಯಾಣಿಕರ ಗಮನ ಸೆಳೆಯುತ್ತಿದೆ.

ಭಾರತದಲ್ಲಿನ ಸ್ಪೇನ್ ರಾಯಭಾರಿ ಜುವಾನ್ ಆಂಟೋನಿಯೊ ಮಾರ್ಚ್ ಪೂಜೋಲ್ ಅವರು ಈ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದರು. ಸಮಾರಂಭ ದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಬಯೊಕಾನ್ ಸಂಸ್ಥೆಯ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹರಿ ಮರಾರ್ ಮತ್ತು ಕಲಾವಿದ ಜೌಮೆ ಪ್ಲೆನ್ಸಾ ಉಪಸ್ಥಿತರಿದ್ದರು.

ಕಲಾಕೃತಿಯ ವಿಶೇಷ: ಬಣ್ಣ ಬಳಿದಿರುವ ಸ್ಟೇನ್ಲೆಸ್ ಸ್ಟೀಲ್ ಲೋಹದಿಂದ ಈ ಕಲಾಕೃತಿಯನ್ನು ನಿರ್ಮಿಸಿದ್ದು, ಬೆಂಗಳೂರು ನಗರವು ಸಂಸ್ಕೃತಿ, ನಾವೀನ್ಯತೆ ಹಾಗೂ ಸೃಜನಶೀಲತೆಯ ಸಂಗಮವಾಗಿದೆ ಎಂಬುದನ್ನು ಈ ಕಲಾಕೃತಿ ಪ್ರತಿಬಿಂಬಿಸುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-4-1717563142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.