ಬೆಂಗಳೂರು: ಮದ್ಯದ ಅಮಲಿನಲ್ಲಿ ನಡೆದ ಗಲಾಟೆಯಲ್ಲಿ ಸ್ನೇಹಿತನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಟ್ಟನಹಳ್ಳಿಯ ಕೆರೆಯ ಬಳಿ ನಡೆದಿದೆ.

ಮೋಹನ್(25) ಕೊಲೆಯಾದ ಯುವಕ. ‘ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಮೋಹನ್ ಗುರುವಾರ ಸಂಜೆ ಸ್ನೇಹಿತ ಮನೋಜ್ ಜತೆಗೆ ಮದ್ಯದ ಪಾರ್ಟಿ ನಡೆಸಲು ಮಟ್ಟನಹಳ್ಳಿಯ ಕೆರೆಯ ಬಳಿ ಬಂದಿದ್ದರು. ಪಾರ್ಟಿ ನಡೆಸುವಾಗ ಇಬ್ಬರ ನಡುವೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ಹೋದಮೇಲೆ ಸ್ಥಳದಲ್ಲಿದ್ದ ಕಲ್ಲು ತೆಗೆದುಕೊಂಡು, ಮೋಹನ್ ಮೇಲೆ ಎತ್ತಿಹಾಕಿ ಮನೋಜ್ ಪರಾರಿ ಆಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.