ಬೆಂಗಳೂರು: ರಸ್ತೆಬದಿಯಲ್ಲಿ ರಾತ್ರಿ ವೇಳೆ ನಿಲುಗಡೆ ಮಾಡಿದ್ದ ಆಟೊ, ಕಾರುಗಳ ಗಾಜು ಒಡೆದು ಹಾನಿಗೊಳಿಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಧ್ರಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಆರೋಪಿಗಳ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಜು ಒಡೆಯುತ್ತಿದ್ದ ದೃಶ್ಯವನ್ನು ಗಮನಿಸಿದ ಸ್ಥಳೀಯರು, ಐವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ತಲೆಮರೆಸಿಕೊಂಡಿರುವ ನಾಲ್ವರ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಮದ್ಯದ ನಶೆಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.