ಬೆಂಗಳೂರು: ಮಾರಕಾಸ್ತ್ರ ಹಿಡಿದು ಗಲಾಟೆ ಮಾಡಿದ ಎಂಟು ಮಂದಿ ಅಪರಿಚಿತರ ವಿರುದ್ಧ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಠಾಣೆಯ ಕಾನ್ಸ್ಟೆಬಲ್ ಮಿಥುನ್ ಅಗ್ನಿ ಅವರನ್ನು ಸಾಮಾಜಿಕ ಜಾಲತಾಣ ವೀಕ್ಷಣಾ ವಿಭಾಗದ ಕರ್ತವ್ಯಕ್ಕೆ ನೇಮಕ ಮಾಡಲಾಗಿತ್ತು. ಮಿಥುನ್ ಅಗ್ನಿ ಅವರು ಕೆ.ಜಿ ಹಳ್ಳಿ ಠಾಣೆಯ ‘ಎಕ್ಸ್’ ಖಾತೆ ಪರಿಶೀಲನೆ ನಡೆಸುತ್ತಿದ್ದರು. ಕರ್ನಾಟಕ ಪೋರ್ಟ್ ಫೋಲಿಯೊ ಹೆಸರಿನ ‘ಎಕ್ಸ್’ ಖಾತೆಗೆ ವಿಡಿಯೊವೊಂದನ್ನು ಅಪ್ಲೋಡ್ ಮಾಡಲಾಗಿತ್ತು. ಎಂಟು ಮಂದಿ ಆರೋಪಿಗಳು ದ್ವಿಚಕ್ರ ವಾಹನ ದಲ್ಲಿ ಬಂದು, ಮಾರಕಾಸ್ತ್ರ ಹಿಡಿದು ಪರಸ್ಪರ ಹೊಡೆದಾಟ ಮಾಡಿಕೊಳ್ಳುತ್ತಿರುವ ದೃಶ್ಯ ಸೆರೆಯಾಗಿತ್ತು. ಆ ದೃಶ್ಯಾವಳಿ ಆಧರಿಸಿ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಹರಿತವಾದ ಆಯುಧ ಹಿಡಿದು ಗಲಾಟೆ ಮಾಡುತ್ತಾ ಸಾರ್ವಜನಿಕರನ್ನು ಭಯಭೀತಿಗೊಳಿಸಿ, ಸಮಾಜದಲ್ಲಿ ಶಾಂತಿಭಂಗ ಉಂಟು ಮಾಡಿರುವುದು ಕಂಡುಬಂದಿದೆ. ವಿಡಿಯೊ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-4-1516750680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.