ಬೆಂಗಳೂರು: ಆಡಿ ಕಾರು ಡಿಕ್ಕಿ ಹೊಡೆದು ಪತಿ ಮೃತಪಟ್ಟು, ಪತ್ನಿ ಮತ್ತು ಮಗಳು ಗಾಯಗೊಂಡಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹುಣಸಮಾರನಹಳ್ಳಿ ನಿವಾಸಿ ಮಹೇಶ್ ಕುಮಾರ್ (40) ಮೃತರು.ಅವರ ಪತ್ನಿ ಕಲಾ (35) ಮತ್ತು ಮಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಚಿಕ್ಕಜಾಲ ಜಂಕ್ಷನ್ ಬಳಿ ದುರ್ಘಟನೆ ನಡೆದಿದೆ.

ಮಂಗಳವಾರ ರಾತ್ರಿ 9ರ ಸುಮಾರಿಗೆ ಮಹೇಶ್ ಕುಮಾರ್, ಪತ್ನಿ ಮತ್ತು ಮಗಳ ಜತೆ ಮದುವೆ ಕಾರ್ಯಕ್ರಮ ಮುಗಿಸಿ ಕೊಂಡು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂತಿರುಗುತ್ತಿ ರುವಾಗ ಚಿಕ್ಕಜಾಲ ಜಂಕ್ಷನ್ ಬಳಿ ವೇಗವಾಗಿ ಬಂದ ಆಡಿ ಕಾರೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಮಹೇಶ್ ಕುಮಾರ್, ಹಿಂಬದಿ ಕುಳಿತಿದ್ದ ಕಲಾ ಮತ್ತು ಮಗಳು ಗಾಯ ಗೊಂಡಿದ್ದರು. ಮಹೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿ ದ್ದಾರೆ ಎಂದು ಪೊಲೀಸರು ಹೇಳಿದರು. ಕಾರಿನ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.. ಸಿಸಿಟಿವಿ ಕ್ಯಾಮೆರಾಗಳ ದೃಶ್ಯ ಪರಿಶೀಲಿಸಲಾಗಿದೆ ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಚಾಲಕನ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-4-184807871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.