ಬೆಂಗಳೂರು: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯು ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಾಯಿ ಮತ್ತು ಶ್ವಾಸಕೋಶ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ 250ಕ್ಕೂ ಅಧಿಕ ಆಟೊ ಚಾಲಕರಿಗೆ ತಪಾಸಣೆ ಮಾಡಲಾಯಿತು.

ಕೆ.ಆರ್. ರಸ್ತೆಯಲ್ಲಿರುವ ಆಸ್ಪತ್ರೆಯ ಆವರಣದಲ್ಲಿ ನಡೆದ ಈ ತಪಾಸಣಾ ಶಿಬಿರಕ್ಕೆ ಎಚ್ಸಿಜಿ ಕರ್ನಾಟಕ ವಿಭಾಗದ ಮುಖ್ಯ ಕಾರ್ಯಾಚರಣೆ ಅಧಿಕಾರಿ ಮನಿಷ್ ಕುಮಾರ್ ಚಾಲನೆ ನೀಡಿದರು. ತಂಬಾಕು ಉತ್ಪನ್ನಗಳ ಸೇವನೆಯ ಅಪಾಯದ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ, ಅಪಾಯದ ವರ್ಗದಲ್ಲಿ ಗುರುತಿಸಲಾದ ಆಟೊ ರಿಕ್ಷಾ ಚಾಲಕರಿಗೆ ಉಚಿತವಾಗಿ ತಪಾಸಣೆ ಮಾಡಲಾಯಿತು.

‘ಆಟೊ ಚಾಲಕರು ನಗರದ ಸಂಚಾರ ದಟ್ಟಣೆಯಲ್ಲಿ ಹೆಚ್ಚಿನ ಸಮಯ ಕಳೆಯಬೇಕಾಗಿದ್ದು, ವಾಹನ ಹೊರಸೂಸುವ ಹೊಗೆ ಮತ್ತು ವಾತಾವರಣದಲ್ಲಿನ ದೂಳು ಅವರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅನಿಯಮಿತ ಆಹಾರ ಪದ್ಧತಿ ಅನುಸರಿಸುವ ಅವರು ಸದಾ ಒತ್ತಡದಲ್ಲಿ ಇರುತ್ತಾರೆ. ಕೆಲವರು ಧೂಮಪಾನ ಸೇರಿ ತಂಬಾಕು ಉತ್ಪನ್ನಗಳನ್ನು ಸೇವಿಸುವ ಮೂಲಕ ಕ್ಯಾನ್ಸರ್ನ ಅಪಾಯ ತಂದುಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅವರು ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಿ, ನಿಯಮಿತ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟರು.

ಆಸ್ಪತ್ರೆಯ ಹಿರಿಯ ಸಲಹೆಗಾರ ಡಾ. ಮಂಜುನಾಥ್ ಎನ್ಎಂಎಲ್, ‘ತಂಬಾಕು ಉತ್ಪನ್ನಗಳ ಸೇವನೆಯು ಬಾಯಿಯ ಕ್ಯಾನ್ಸರ್ಗೆ ಪ್ರಮುಖ ಕಾರಣವಾಗಿದೆ. ಕ್ಯಾನ್ಸರ್ ಮುಂದುವರಿದ ಹಂತವನ್ನು ತಲುಪುವವರೆಗೂ ಅನೇಕ ವ್ಯಕ್ತಿಗಳು ರೋಗಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆಟೊ ಚಾಲಕರ ಸಮುದಾಯ ನಿರಂತರ ಮಾಲಿನ್ಯಕ್ಕೆ ಒಡ್ಡಿಕೊಳ್ಳುತ್ತದೆ. ಒತ್ತಡ ನಿವಾರಣೆಗೆ ಚಾಲಕರು ತಂಬಾಕು ಉತ್ಪನ್ನಗಳ ಮೊರೆ ಹೋಗುವ ಸಾಧ್ಯತೆ ಇರುತ್ತದೆ. ಇಂತಹ ಸಮುದಾಯಕ್ಕೆ ಆರೋಗ್ಯ ತಪಾಸಣೆ ಬಗ್ಗೆ ಜಾಗೃತಿ ಅಗತ್ಯ’ ಎಂದು ಹೇಳಿದರು.

ಕ್ಯಾನ್ಸರ್ ತಜ್ಞ ಡಾ. ಸತೀಶ್ ಸಿ.ಟಿ., ‘ತಂಬಾಕು ಉತ್ಪನ್ನಗಳ ಸೇವನೆ ಹಾಗೂ ದೀರ್ಘಕಾಲ ವಾಯುಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಶ್ವಾಸಕೋಶದ ಕ್ಯಾನ್ಸರ್ ಮತ್ತು ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ’ ಎಂದು ಅಭಿಪ್ರಾಯಪಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-4-1911846427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.