ಬೆಂಗಳೂರು: ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸುಸಜ್ಜಿತವಾದ ಬಹು–ಅಂತಸ್ತಿನ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ.

ಬನಶಂಕರಿ ದೇವಸ್ಥಾನದ ಸುತ್ತಮುತ್ತ ವಾಹನ ದಟ್ಟಣೆ ಹೆಚ್ಚಾಗು ತ್ತಿರುವುದರಿಂದ, ಮಂಗಳವಾರ, ಶುಕ್ರವಾರ ಹಾಗೂ ವಿಶೇಷ ದಿನಗಳಂದು ಸಾವಿರಾರು ಭಕ್ತರಿಗೆ ಕಾರು– ದ್ವಿಚಕ್ರ ವಾಹನ ನಿಲ್ಲಿಸಲು ಸ್ಥಳಾವಕಾಶ ಇರುವುದಿಲ್ಲ. ಹೀಗಾಗಿ, ದೇವಸ್ಥಾನದ ಭಕ್ತರಿಗೆ ಮೀಸಲಾಗಿರುವ ಪಾರ್ಕಿಂಗ್ ಸ್ಥಳವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಪ್ರಸ್ತುತ ದೇವಸ್ಥಾನದ ಮುಂಭಾಗದಲ್ಲಿರುವ ದಾಸೋಹ ಭವನದ ಬಳಿ ವಾಹನ ನಿಲುಗಡೆಗೆ ನಿಯಮಿತ ಸ್ಥಳವಿದೆ. ಪ್ರಸ್ತಾವಿತ ಬಹು–ಅಂತಸ್ತಿನ ಪಾರ್ಕಿಂಗ್ ಕಾಂಪ್ಲೆಕ್ಸ್ ಅನ್ನು ದೇವಸ್ಥಾನಕ್ಕೆ ಸೇರಿದ 100 x 150 ಅಡಿ ಸ್ಥಳದಲ್ಲಿ ನಿರ್ಮಿಸಲಾಗುತ್ತದೆ. ಆರರಿಂದ ಎಂಟು ಅಂತಸ್ತುಗಳನ್ನು ಒಳಗೊಳ್ಳಲಿದೆ. ಪ್ರತಿಯೊಂದು ಅಂತಸ್ತಿನಲ್ಲಿ ಸುಮಾರು 80 ಕಾರುಗಳನ್ನು ನಿಲುಗಡೆ ಮಾಡಬಹುದು. ಒಟ್ಟಾರೆ, 700 ಕಾರುಗಳ ನಿಲುಗಡೆ ಸಾಮರ್ಥ್ಯದ ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತದೆ.

‘ದೇವಸ್ಥಾನಕ್ಕೆ ಬರುವ ಭಕ್ತರ ವಾಹನಗಳಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಸ್ಥಳಾವಕಾಶವಿದ್ದರೆ ಸಾರ್ವಜನಿಕರ ವಾಹನಗಳಿಗೂ ಅವಕಾಶ ನೀಡಲಾಗುತ್ತದೆ. ಪಾರ್ಕಿಂಗ್ ಕಟ್ಟಡ ನಿರ್ಮಿಸಲು ದೇವಸ್ಥಾನದ ನಿಧಿಯನ್ನು ಬಳಸಿಕೊಳ್ಳಲಾಗುತ್ತದೆ. ಲೋಕೋಪಯೋಗಿ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ವಿನ್ಯಾಸ ಹಾಗೂ ವಿಸ್ತೃತ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಕೋರಲಾಗಿದೆ’ ಎಂದು ಬನಶಂಕರಿ ದೇವಸ್ಥಾನದ ಕಾರ್ಯಕಾರಿ ಅಧಿಕಾರಿ ಎನ್. ಕೃಷ್ಣಪ್ಪ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-1489600147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.