ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಲೂಟಿ: ಉತ್ತರ ಪ್ರದೇಶದಲ್ಲಿ ಆರೋಪಿಗಳ ಬಂಧನ

Last Updated 23 ಡಿಸೆಂಬರ್ 2022, 21:45 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನ. 25ರಂದು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಬಾಗಿಲನ್ನು ಕತ್ತರಿಸಿ ಸುಮಾರು ₹3.50 ಕೋಟಿ ಮೌಲ್ಯದ 12 ಕೆ.ಜಿ. ಚಿನ್ನಾಭರಣ, ₹14 ಲಕ್ಷ ನಗದು ದೋಚಿದ್ದ ಪ್ರಕರಣದಲ್ಲಿ ಶಾಮೀಲಾಗಿದ್ದ ಕೆಲ ಆರೋಪಿಗಳನ್ನು ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೊಸಹಳ್ಳಿ ಸುತ್ತಮುತ್ತಲಿನ ಪ್ರದೇಶದ ಕೆಲ ಸಿಸಿ ಟಿವಿಗಳಲ್ಲಿ ಸೆರೆಯಾಗಿದ್ದ ಟ್ರಕ್‌ನ ಚಲನವಲನ ದೃಶ್ಯಾವಳಿಗಳ ಆಧಾರದ
ಮೇಲೆ ಆರೋಪಿಗಳ ಬೆನ್ನುಹತ್ತಿದ್ದ ಪೊಲೀಸರ ತಂಡ ಉತ್ತರ ಪ್ರದೇಶದ ಇಬ್ಬರು ಟ್ರಕ್‌ ಚಾಲಕರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸ್ಥಳೀಯ ಪೊಲೀಸರ ಸಹಕಾರದೊಂದಿಗೆಕಾರ್ಯಾಚರಣೆ ನಡೆಸಿ ಆರೋಪಿ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಶನಿವಾರ ಅಥವಾ ಭಾನುವಾರ ನಗರದ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆದು ವಿಚಾರ ನಡೆಸಲಾಗುವುದು ಎಂದು ಪೊಲೀಸರು
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT