‘ಇ–ಶೌಚಾಲಯ ನಿರ್ವಹಣೆ ಕೊರತೆ’

ವಿಶ್ವೇಶ್ವರಪುರದ ಕೆನರಾ ಬ್ಯಾಂಕ್ ಡಯಾಗ್ನಲ್ ರಸ್ತೆಯ ವಾರ್ಡ್ ಸಂಖ್ಯೆ 143ರಲ್ಲಿ ಇ–ಶೌಚಾಲಯದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ನಿರ್ವಹಣೆ ಕೊರತೆಯಿಂದ ಈ ಶೌಚಾಲಯ ಬಳಕೆ ಮಾಡದಂತಹ ಸ್ಥಿತಿಗೆ ತಲುಪಿದೆ. ಸಾರ್ವಜನಿಕರು ಶೌಚಾಲಯದ ಪಕ್ಕದಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಕೂಡಲೇ ಇ–ಶೌಚಾಲಯದ ಸ್ವಚ್ಛತೆಗೆ ಆದ್ಯತೆ ನೀಡಬೇಕು.

-ಮುರಳೀಧರ, ವಿಶ್ವೇಶ್ವರಪುರ

‘ಅಗೆದಿರುವ ರಸ್ತೆಯನ್ನು ಸರಿಪಡಿಸಿ’

ಸಹಕಾರನಗರದಿಂದ ಕೊಡಿಗೆಹಳ್ಳಿಗೆ ಸಂಪರ್ಕ ಕಲ್ಪಿಸುವ ಸಿ ಬ್ಲಾಕ್ 21–ಬಿ ಕ್ರಾಸ್ನ ಎರಡನೇ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದೆ. ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಒಂದೇ ಭಾಗದಲ್ಲಿ ಮೂರು ಕಡೆಗೆ ಅಗೆದಿರುವುದರಿಂದ ಸಂಚಾರ ದಟ್ಟಣೆ ಆಗುತ್ತಿದೆ. ದ್ವಿಚಕ್ರ ವಾಹನ ಸವಾರರು ಇಲ್ಲಿ ಬಿದ್ದು ಕೈ ಕಾಲುಗಳನ್ನು ಮುರಿದುಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.

-ಸಹಕಾರನಗರದ ನಿವಾಸಿಗಳು

‘ಧರೆಗೆ ಉರುಳಿದ ಮಾರ್ಗಸೂಚಿ ಫಲಕಗಳು’

ತ್ಯಾಗರಾಜನಗರ, ಟಾಟಾ ಸಿಲ್ಕ್ ಫಾರ್ಮ್ನ ಬಹುತೇಕ ಭಾಗದಲ್ಲಿರುವ ಮಾರ್ಗಸೂಚಿ ಫಲಕಗಳು ಧರೆಗೆ ಉರುಳಿ ಬಿದ್ದಿದ್ದು, ಇನ್ನೂ ಕೆಲವು ಕೆಳಗಡೆ ಬೀಳುವ ಹಂತಕ್ಕೆ ತಲುಪಿವೆ. ಮಾರ್ಗಸೂಚಿ ಫಲಕಗಳು ಇಲ್ಲದ ಕಾರಣ ಈ ಭಾಗಕ್ಕೆ ಬರುವ ಹೊಸಬರು ವಿಳಾಸ ಗೊತ್ತಾಗದೇ ಪರದಾಡುತ್ತಿದ್ದಾರೆ. ಧರೆಗೆ ಉರುಳಿದ ಮಾರ್ಗಸೂಚಿ ಫಲಕಗಳನ್ನು ಕೂಡಲೇ ಸರಿಪಡಿಸಬೇಕು.

-ದೀಪಕ್ ಶಿರಾಲಿ, ತ್ಯಾಗರಾಜನಗರ

‘ಕಾಲುಸೇತುವೆ ಕಾಮಗಾರಿ ಪೂರ್ಣಗೊಳಿಸಿ’

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳ ಮಧ್ಯದಲ್ಲಿರುವ ನಾಗರಬಾವಿಯ ವೃಷಭಾವತಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಕಾಲು ಸೇತುವೆ ಕಾಮಗಾರಿ ಸ್ಥಗಿತಗೊಂಡಿದೆ. ಕೆಲ ತಿಂಗಳ ಹಿಂದೆಯೇ ಕಾಮಗಾರಿ ಪ್ರಾರಂಭಿಸಲಾಗಿತ್ತು. ಬಿಬಿಎಂಪಿ ಕೂಡಲೇ ಈ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಬೇಕು.

-ಎಚ್. ತುಕಾರಾಂ, ಬಾಲಗಂಗಾಧರ ನಗರ

‘ರಸ್ತೆಯಲ್ಲಿ ಹರಿಯುವ ಚರಂಡಿ ನೀರು’

ಚಿಕ್ಕಪೇಟೆಯ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದೆ. ಇದರಿಂದ ವಾಹನ ಸಂಚಾರಕ್ಕೂ ಸಮಸ್ಯೆ ಆಗಿದೆ. ಮೂರು ವರ್ಷಗಳಿಂದ ತ್ಯಾಜ್ಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ಆದರೆ ಈ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಸವಾರರು ಮೂಗು ಮುಚ್ಚಿಕೊಂಡು ಹೋಗಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಗಮನ ಹರಿಸುತ್ತಿಲ್ಲ.

-ಶಿವಪ್ರಸಾದ್, ಚಿಕ್ಕಪೇಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.