ಬೆಂಗಳೂರು: ‘ಹಿಂದಿನ ಬಿಬಿಎಂಪಿ ಅವಧಿಯಲ್ಲಿ ಸುಲಭ್ ಶೌಚಾಲಯಗಳ ನಿರ್ವಹಣೆ, ದಂಡ ವಸೂಲಿ ಹೆಸರಿನಲ್ಲಿ ದುರುಪಯೋಗ ನಡೆದಿದ್ದು, ಇದನ್ನು ತನಿಖೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ಲೋಕಾಯುಕ್ತ ಹಾಗೂ ಜಿಬಿಎಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ದೂರು ನೀಡಿದೆ.

‘ಸುಲಭ್ ಶೌಚಾಲಯ ನಿರ್ವಹಣೆ ನಡೆಸುತ್ತಿರುವ ಗುತ್ತಿಗೆದಾರರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರೂ, ಪಾಲಿಕೆಗೆ ಪಾವತಿಸಬೇಕಾದ ಗುತ್ತಿಗೆ ಮೊತ್ತ ಜಮೆ ಮಾಡದಿರುವುದು, ಅಧಿಕಾರಿಗಳು ಲೆಕ್ಕ ಪರಿಶೋಧಕರಿಗೆ ದಾಖಲೆ ನೀಡದೇ ಕರ್ತವ್ಯಲೋಪ ಎಸಗಿರುವುದು, ಅಕ್ರಮವಾಗಿ ದಂಡ ವಸೂಲಿ ಮಾಡಿರುವುದು 2023-24ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ ಬಹಿರಂಗವಾಗಿದೆ. ಇದರ ಆಧಾರದ ಮೇಲೆ ಈ ದೂರು ಸಲ್ಲಿಸಲಾಗಿದೆ’ ಎಂದು ರಾಜ್ಯ ಜಂಟಿ ಕಾರ್ಯದರ್ಶಿ ಎಲ್.ಜೀವನ್ ತಿಳಿಸಿದ್ದಾರೆ.

ರಾಜಾಜಿನಗರದ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಯಾವುದೇ ಅಧಿಕೃತ ದರಪಟ್ಟಿ, ಸುತ್ತೋಲೆಗಳಿಲ್ಲದೆ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಿ, ಸರ್ಕಾರದ ಖಾತೆಗೆ ಜಮೆ ಮಾಡದೇ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಚಾಮರಾಜಪೇಟೆ ಸಹಿತ ಹಲವು ಪ್ರದೇಶಗಳಲ್ಲಿ ಸಾರ್ವಜನಿಕ ಆಸ್ತಿಗಳ ನಿರ್ವಹಣೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಬಾಕಿ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-661491754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.