ಬೆಂಗಳೂರು: ಐದು ನಗರ ಪಾಲಿಕೆಗಳಲ್ಲಿ ಟೋಯಿಂಗ್ ಮಾಡುವ ವಾರಸುದಾರ ರಿಲ್ಲದ ವಾಹನಗಳ ನಿಲುಗಡೆಗೆ ಪಾಲಿಕೆವಾರು ಸ್ಥಳಗಳನ್ನು ಅಂತಿಮಗೊಳಿಸುವಂತೆ ಆಡಳಿತಾಧಿಕಾರಿ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಇಲಾಖೆಗಳೊಂದಿಗೆ ಮಂಗಳ ವಾರ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಟೋಯಿಂಗ್ ಮಾಡಿದ ವಾಹನಗಳನ್ನು ನಿಲುಗಡೆ ಮಾಡುವ ಸಲುವಾಗಿ ಉತ್ತರ ನಗರ ಪಾಲಿಕೆಯಲ್ಲಿ ಈಗಾಗಲೇ ಸ್ಥಳವನ್ನು ಗುರುತಿಸಲಾಗಿದೆ. ಕೇಂದ್ರ ಮತ್ತು ದಕ್ಷಿಣ ನಗರ ಪಾಲಿಕೆಗಳಲ್ಲಿ ಸ್ಥಳ ಗುರುತಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಪೂರ್ವ ಹಾಗೂ ಪಶ್ಚಿಮ ನಗರ ಪಾಲಿಕೆ ಗಳಲ್ಲಿಯೂ ತ್ವರಿತವಾಗಿ ಸ್ಥಳಗಳನ್ನು ಗುರುತಿಸುವಂತೆ ಸೂಚನೆ ನೀಡಿದರು.

ಅರ್ಕಾವತಿ ಬಡಾವಣೆಗೆ ಹೊಂದಿಕೊಂಡಿರುವ ಜಕ್ಕೂರು ಕೆರೆಯ ಪಕ್ಕದಲ್ಲಿರುವ ಸಂಪಿಗೆಹಳ್ಳಿ ಮುಖ್ಯರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಬಿಡಿಎ ಹಾಗೂ ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ವಾರದೊಳಗೆ ಸಮೀಕ್ಷಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ನಾಗವಾರ ರಸ್ತೆ, ಟ್ಯಾನರಿ ರಸ್ತೆ, ಲೋವರ್ ಅಗರ ರಸ್ತೆ, ತಿಮ್ಮಯ್ಯ ರಸ್ತೆ, ನೇತಾಜಿ ರಸ್ತೆ, ಸುಲ್ತಾನ್ಪಾಳ್ಯ ರಸ್ತೆ ಹಾಗೂ ನಾಗರಬಾವಿ ಮುಖ್ಯ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸಬೇಕಿದೆ. ಆದರೆ, ಇದಕ್ಕೆ ಮುನ್ನ ಜಲಮಂಡಳಿ ವತಿಯಿಂದ ಕೈಗೆತ್ತಿಕೊಂಡಿರುವ ಪೈಪ್ಲೈನ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ನಗರದಲ್ಲಿ 20 ಅಗ್ನಿಶಾಮಕ ಠಾಣೆಗಳು ಕಾರ್ಯನಿರ್ವಹಿಸಲಿದ್ದು, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಅಗ್ನಿಶಾಮಕ ಠಾಣೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಅಗ್ನಿಶಾಮಕ ಠಾಣೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸ್ವಚ್ಛವಾಗಿಡಲು ಸೂಚನೆ: ಶಿವಾನಂದ ವೃತ್ತದ ಸಮೀಪದ ಮಾದವನಗರ ರೈಲ್ವೆ ಕೆಳಸೇತುವೆ ಬಳಿ ಪರಿಶೀಲನೆ ನಡೆಸಿದ ವೇಳೆ, ಮಳೆನೀರು ಹರಿವಿಗಾಗಿ ಅಳವಡಿಸಲಾಗಿರುವ ಗ್ರೇಟಿಂಗ್ಗಳ್ನು ಸ್ವಚ್ಛವಾಗಿಡುವಂತೆ ಮಹೇಶ್ವರ್ ರಾವ್ ಸೂಚಿಸಿದರು.

ಡಾ. ರಾಜ್ಕುಮಾರ್ ರಸ್ತೆಯಲ್ಲಿ ನವರಂಗ್ನಿಂದ ಸ್ಟಾರ್ ಬಜಾರ್ ಸಿಗ್ನಲ್ವರೆಗೆ 1.8 ಕಿ.ಮೀ. ಉದ್ದದ ವೈಟ್ ಟಾಪಿಂಗ್ ಕಾಮಗಾರಿಯನ್ನು ಒಂದು ಬದಿಯಲ್ಲಿ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸ ಬೇಕು. ನಂತರ ಮತ್ತೊಂದುಬದಿಯ ಕಾಮಗಾರಿಯನ್ನು ಕೈಗೆತ್ತಿ ಕೊಂಡು ಅಕ್ಟೋಬರ್ ಅಂತ್ಯದೊಳಗೆ ಸಂಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-4-357735550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.