ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕೇಂಬ್ರಿಡ್ಜ್ ಬಡಾವಣೆ, ದೂಕನಹಳ್ಳಿ ಹಾಗೂ ದೊಮ್ಮಲೂರು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರವುಗೊಳಿಸಿ, ₹12 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.

ಕೇಂಬ್ರಿಡ್ಜ್ ಬಡಾವಣೆಯ ನಿವೇಶನ ಸಂಖ್ಯೆ 61ರ 40x60 ಅಡಿ ಅಳತೆಯ ನಿವೇಶನ, ದೂಕನಹಳ್ಳಿ ಗ್ರಾಮದ ನಿವೇಶನ ಸಂಖ್ಯೆ 3746ರ 40x40 ಅಡಿ ನಿವೇಶನ ಮತ್ತು ದೊಮ್ಮಲೂರು 1ನೇ ಹಂತದಲ್ಲಿರುವ ನಿವೇಶನ ಸಂಖ್ಯೆ30ರ 20x40ರಲ್ಲಿ ನಿರ್ಮಿಸಿದ್ದ ಕಟ್ಟಡ ಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವು ಗೊಳಿಸಲಾಯಿತು. ಬಳಿಕ ಪ್ರಾಧಿಕಾರ ಈ ಜಾಗವನ್ನು ಸುಪರ್ದಿಗೆ ಪಡೆದುಕೊಂಡು ಸುತ್ತಲೂ ಬೇಲಿ ಹಾಕಿದೆ. ಕಾರ್ಯಾಚರಣೆ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪೂರ್ವ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿ ಯರ್, ಸ್ಥಳೀಯ ಪೊಲೀಸರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-4-187874612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.