ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) 906 ಕಿರಿಯ ಪವರ್ ಮ್ಯಾನ್ ಹುದ್ದೆಗಳ ಭರ್ತಿಗೆ ಸಂಬಂಧಿಸಿ ಕೂಡಲೇ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಖಾಲಿ ಇರುವ ಕಿರಿಯ ಪವರ್ ಮ್ಯಾನ್ ಹುದ್ದೆಗಳ ಭರ್ತಿಗೆ 2024ರ ಅಕ್ಟೋಬರ್ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ವರ್ಷದ ಮಾರ್ಚ್ನಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಾಗಿ ಸುಮಾರು ಮೂರು ತಿಂಗಳಾದರೂ ಅಂತಿಮ ಪಟ್ಟಿಯನ್ನು ಪ್ರಕಟಿಸಿಲ್ಲ ಎಂದು ಅಭ್ಯರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಬೇರೆ ಬೇರೆ ಕಂಪನಿಗಳಲ್ಲಿ ಈಗಾಗಲೇ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗಿದೆ. ಆದರೆ, ಬೆಸ್ಕಾಂನಲ್ಲಿ ಇನ್ನೂ ಅಂತಿಮ ಆಯ್ಕೆ ಪಟ್ಟಿಯನ್ನೇ ಪ್ರಕಟಿಸಿಲ್ಲ. ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದವರು ಕೆಲಸ ಸಿಗಲಿದೆ ಎಂಬ ಆಸೆಯಿಂದ ಉನ್ನತ ವ್ಯಾಸಂಗಕ್ಕೂ ಹೋಗದೆ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಬೇಗ ಪಟ್ಟಿ ಪ್ರಕಟಿಸಿದರೆ ಭವಿಷ್ಯದ ಬಗ್ಗೆ ತೀರ್ಮಾನ ತೆಗೆದು ಕೊಳ್ಳಲು ಅನುಕೂಲವಾಗಲಿದೆ ಎಂದು ಅಭ್ಯರ್ಥಿಗಳು ಹೇಳಿದರು.

ತಾತ್ಕಾಲಿಕ ಪಟ್ಟಿ ಪ್ರಕಟಣೆ ನಂತರ ಆಕ್ಷೇಪಣೆ ಸಲ್ಲಿಸುವ ಅವಧಿಯೂ ಮುಗಿದಿದೆ. ಸಾವಿರಾರು ಅಭ್ಯರ್ಥಿಗಳು ಹಲವು ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಾ ಇದ್ದಾರೆ. ಬೇಗ ಪಟ್ಟಿ ಪ್ರಕಟಿಸಿದರೆ ಕೆಲವರಿಗಾದರೂ ಅನುಕೂಲವಾಗಲಿದೆ ಎಂದು ಅಭ್ಯರ್ಥಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-4-612127129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.