ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ತಲಘಟ್ಟಪುರ ಠಾಣೆ ಪೊಲೀಸರು, ₹15 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಠಾಣಾ ವ್ಯಾಪ್ತಿಯ ವರಹಾಸಂದ್ರದಲ್ಲಿ ನಿವಾಸಿಯೊಬ್ಬರು ಯಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡರು.

ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾತ್ಮೀದಾರರಿಂದ ಮಾಹಿತಿ ಕಲೆ ಹಾಕಿ, ನೈಸ್ ರಸ್ತೆಯ ಬಳಿ ದ್ವಿಚಕ್ರ ವಾಹನ ಸಮೇತ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಯಿತು. ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಮಾವಿನ ತೋಪು, ರಾಜಹಂಸ ಗಾರ್ಡನ್ ಪಕ್ಕದ ಖಾಲಿ ಜಾಗ ಹಾಗೂ ನಾಗೇಗೌಡನಪಾಳ್ಯದ ಬಿಡಿಎ ನಿವೇಶನದಲ್ಲಿ ನಿಲ್ಲಿಸಿದ್ದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಆರೋಪಿಗಳ ಬಂಧನದಿಂದ ತಲಘಟ್ಟಪುರ ಠಾಣೆಯ 3, ಕೋಣನಕುಂಟೆ ಠಾಣೆಯ 2, ಗಿರಿನಗರ, ಕರ್ಮಷಿಯಲ್ ಸ್ಟ್ರೀಟ್, ಬನಶಂಕರಿ, ತಿಲಕನಗರ, ಬಂಡೆಪಾಳ್ಯ, ರಾಜರಾಜೇಶ್ವರಿ ನಗರ, ಹನುಮಂತನಗರ, ಭಾರತಿನಗರ, ಸುಬ್ರಮಣ್ಯಪುರ, ಸಿದ್ದಾಪುರ ಪೊಲೀಸ್ ಠಾಣೆಗಳ ತಲಾ ಒಂದು ಪ್ರಕರಣ ಸೇರಿ ಒಟ್ಟು 10 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹಾಗೂ ನಗರದ ವಿವಿಧ ಪೊಲೀಸ್ ಠಾಣೆಗಳ ಐದು ಪ್ರಕರಣಗಳು ಪತ್ತೆಯಾಗಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-4-1411207852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.