ಬೆಂಗಳೂರು: ಸಂಜಯನಗರ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗೆದ್ದಲಹಳ್ಳಿಯ ನಿವಾಸಿ ರೋಷನ್ (38) ಮೃತಪಟ್ಟವರು.

ಮಂಗಳವಾರ ಬೆಳಿಗ್ಗೆ 10.15ರ ಸುಮಾರಿಗೆ ವೈಭವ ಚಿತ್ರಮಂದಿರದ ಕಡೆಯಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ರೋಷನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಕೊಡಗಿನ ರೋಷನ್ ಅವರು ಸಾಫ್ಟ್ವೇರ್ ಎಂಜಿನಿಯರ್ ಆಗಿ ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗೆದ್ದಲಹಳ್ಳಿಯ ಆಶೀರ್ವಾದ್ ಅಪಾರ್ಟ್ಮೆಂಟ್ನಲ್ಲಿ ಕುಟುಂಬದೊಂದಿಗೆ ನೆಲಸಿದ್ದರು. ಮಂಗಳವಾರ ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ರೋಷನ್ ಅವರು ಹೆಲ್ಮೆಟ್ ಧರಿಸಿದ್ದರೂ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು ಎಂದು ಪೊಲೀಸರು ತಿಳಿಸಿದರು.

ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಚಾಲಕ ಕಲ್ಲಪ್ಪ ಮುಚಡಿ(40) ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಸಿ.ಎ.ರವೀಂದ್ರ ಅವರು ನೀಡಿದ ದೂರು ಆಧರಿಸಿ ಸಂಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.