ಬೆಂಗಳೂರು: ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ವೊಂದು ಬೆಂಕಿಗೆ ಆಹುತಿಯಾಗಿದೆ. ನಾಗಾವರದಿಂದ ಹೆಬ್ಬಾಳದ ಕಡೆಗೆ ಸೋಮವಾರ ತಡರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಬೆಂಕಿಗೆ ಆಹುತಿ ಆಯಿತು.
ತಡರಾತ್ರಿ ಸುರಿಯುತ್ತಿದ್ದ ಮಳೆಯ ನಡುವೆಯೂ ಬಸ್ ಸುಟ್ಟು ಹೋಗಿದೆ. ಬಸ್ನಲ್ಲಿ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಇಪ್ಪತ್ತು ಮಂದಿ ಪ್ರಯಾಣಿಕರು ಇದ್ದರು. ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ಎಲೆಕ್ಟ್ರಿಕ್ ಬಸ್ನಲ್ಲಿ ಉಂಟಾದ ಶಾರ್ಟ್ ಸರ್ಕಿಟ್ನಿಂರ ಅವಘಡ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.