ಬೆಂಗಳೂರು: ಬಿಎಂಟಿಸಿಯ ಕಾರ್ಮಿಕ ಮತ್ತು ಕಲ್ಯಾಣ ವಿಭಾಗದಿಂದ ಬಿಎಂಟಿಸಿ ಘಟಕ 11ರ (ಪುಟ್ಟೇನಹಳ್ಳಿ) ಸಿಬ್ಬಂದಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಆರೋಗ್ಯ ಹಾಗೂ ಕಲ್ಯಾಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಘಟಕಗಳನ್ನು ಗುರುತಿಸಿ, ‘ಉತ್ತಮ ಘಟಕ’ ಪ್ರಶಂಸನಾ ಪತ್ರ ಹಾಗೂ ಸ್ಮರಣಿಕೆ ವಿತರಿಸಿ ಗೌರವಿಸಲಾಯಿತು.

ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಅಬ್ದುಲ್ ಅಹದ್ ಮಾತನಾಡಿ, ‘ನೌಕರರು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಒತ್ತಡ ನಿವಾರಣೆಗಾಗಿ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸುಲಭ ಯೋಗಾಭ್ಯಾಸ ಹಾಗೂ ಧ್ಯಾನಗಳನ್ನು ಮಾಡಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ನೌಕರರ ಆರೋಗ್ಯಾಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಪಿ.ವೈ. ನಾಯಕ್ ಮಾಹಿತಿ ನೀಡಿದರು.

ಸಂಸ್ಥೆಯ ಏಳು ವಲಯಗಳ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಹಾಗೂ 51 ಘಟಕಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-4-1179287642

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.