ಬೆಂಗಳೂರು: ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಕಿಕ್ ಬಂಕ್ ಬಾರ್ ಪಕ್ಕದ ಖಾಲಿ ಪ್ರದೇಶದಲ್ಲಿ ಸುನಿಲ್ ನಾಯಕ್ (42) ಎಂಬುವರನ್ನು ಕೊಲೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿದ್ದ ಆರೋಪಿಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿ ಯಾರಂಡನಹಳ್ಳಿಯಲ್ಲಿ ನೆಲಸಿದ್ದ ಒಡಿಶಾದ ಬುಸುದೇವ್ ಮಲ್ಲಿಕ್ (30) ಬಂಧಿತ.

ಆನಂದ ಎಂಬುವವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಒಡಿಶಾದಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಜೀವನ ನಿರ್ವಹಣೆಗೆ ಕೂಲಿ ಕೆಲಸ ಮಾಡುತ್ತಿದ್ದ. ಸುನಿಲ್ ನಾಯಕ್ ಅವರ ಪತ್ನಿಯ ಜತೆಗೆ ಸಲುಗೆ ಬೆಳೆಸುವ ಆಲೋಚನೆಯಿಂದ ಆರೋಪಿ ಬುಸುದೇವ್ ಮಲ್ಲಿಕ್ ಕೊಲೆಗೆ ಸಂಚು ರೂಪಿಸಿದ್ದ. ಮಾರ್ಚ್ 26ರಂದು ವಿಪರೀತ ಮದ್ಯಪಾನ ಮಾಡಿದ್ದ ಆರೋಪಿ, ಮಾತುಕತೆ ಮಾಡುವ ನೆಪದಲ್ಲಿ ಕೈಗಾರಿಕಾ ಪ್ರದೇಶಕ್ಕೆ ಸುನಿಲ್ ನಾಯಕ್ ಅವರನ್ನು ಕರೆಸಿಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಬಳಿಕ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ತುಂಬಿ ಬಾರ್ ಪಕ್ಕದ ಖಾಲಿ ಪ್ರದೇಶದಲ್ಲಿ ಎಸೆದು ಹೋಗಿದ್ದ ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-15-640050877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.