ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟ ಪ್ರಕರಣದ ತನಿಖೆಗೆ ಲೋಕಾಯುಕ್ತವು ತನಿಖಾ ತಂಡ ರಚಿಸಿದೆ.

ಏಪ್ರಿಲ್ 29ರ ಸಂಜೆ ದುರಂತ ಸಂಭವಿಸಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಏಪ್ರಿಲ್ 30ರಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಸೂಚಿಸಿದ್ದರು.

ಲೋಕಾಯುಕ್ತ ಎಸ್ಪಿ, ಜಿಲ್ಲಾ ನ್ಯಾಯಾಧೀಶ ಮತ್ತು ಲೋಕಾಯುಕ್ತದ ತಾಂತ್ರಿಕ ವಿಭಾಗದ ಮುಖ್ಯ ಎಂಜಿನಿಯರ್ ಹಾಗೂ ಅಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿ ಲೋಕಾಯುಕ್ತರು ಆದೇಶಿಸಿದ್ದಾರೆ. ಮೇ 16ರ ಒಳಗೆ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ತನಿಖಾ ತಂಡವು ಸೋಮವಾರ ಮಧ್ಯಾಹ್ನವೇ ಘಟನಾ ಸ್ಥಳಕ್ಕೆ ತೆರಳಿ, ಪ್ರಾಥಮಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಆಸ್ಪತ್ರೆಯ ಕಾಂಪೌಂಡ್ ಕುರಿತಾಗಿ ಮಾಹಿತಿ ಒದಗಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಯ ಅಧಿಕಾರಿಗಳಿಗೆ ನೋಟಿಸ್ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-14-1287487556

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.