ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಗೋಡೆ ಸಮೀಪ ಅವೈಜ್ಞಾನಿಕವಾಗಿ ಮಣ್ಣು ಹಾಗೂ ನಿರ್ಮಾಣ ತ್ಯಾಜ್ಯವನ್ನು (ಡೆಬ್ರಿಸ್) ಸುರಿದ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಬೌರಿಂಗ್ ಆಸ್ಪತ್ರೆಯ ಗೋಡೆ ಏಪ್ರಿಲ್ 29ರಂದು ಕುಸಿದು, ಏಳು ಜನ ಮೃತಪಟ್ಟಿದ್ದರು. ಈ ಸ್ಥಳಕ್ಕೆ ಮೇ 14ರಂದು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದ ಶಾಲಿನಿ ರಜನೀಶ್, ಗೋಡೆ ಕುಸಿತಕ್ಕೆ ಕಾರಣವಾದ ಮಾಹಿತಿಯನ್ನು ಪಡೆದುಕೊಂಡಿದ್ದರು.

ಗೋಡೆಯ ಸಮೀಪ ಸುಮಾರು 3,600 ಕ್ಯೂಬಿಕ್ ಮೀಟರ್ ತ್ಯಾಜ್ಯ–ಮಣ್ಣನ್ನು ಅವೈಜ್ಞಾನಿಕವಾಗಿ ಸುರಿಯಲಾಗಿತ್ತು. ಇದರ ಒತ್ತಡ ಹೆಚ್ಚಾದ್ದರಿಂದ ಗೋಡೆ ಕುಸಿದಿದೆ ಎಂದು ವರದಿ ತಿಳಿಸಿದೆ.

‘ಆಸ್ಪತ್ರೆಯ ಆವರಣದಲ್ಲಿ ಹೊಸ ವೈದ್ಯಕೀಯ ಕಾಲೇಜು ನಿರ್ಮಿಸಲು 2019ರಲ್ಲಿ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆದಾರರು ಗೋಡೆಯ ಸಮೀಪ ನಿರ್ಮಾಣ ತ್ಯಾಜ್ಯವನ್ನು ಸುರಿದಿದ್ದಾರೆ ಎಂದು ಹೇಳಲಾಗಿದೆ. ಆರೋಗ್ಯ ಇಲಾಖೆ ನೀಡಿದ್ದ ಕಾರ್ಯಾದೇಶದಲ್ಲಿ, ನಿರ್ಮಾಣ ತ್ಯಾಜ್ಯವನ್ನು ನಗರದ ಹೊರಭಾಗದಿಂದ ಕನಿಷ್ಠ 30 ಕಿಲೋಮೀಟರ್ ದೂರಕ್ಕೆ ಸಾಗಿಸಿ ವಿಲೇವಾರಿ ಮಾಡಬೇಕು ಎಂದಿದೆ. ಅದಕ್ಕಾಗಿ ₹11.54 ಲಕ್ಷದ ವೆಚ್ಚವನ್ನೂ ನಮೂದಿಸಲಾಗಿತ್ತು’ ಎಂದು ವರದಿಯಲ್ಲಿ ತಿಳಿಸಿರುವುದನ್ನು ಮುಖ್ಯ ಕಾರ್ಯದರ್ಶಿಯವರು ಉಲ್ಲೇಖಿಸಿದ್ದಾರೆ.

ನಿರ್ಮಾಣ ಯೋಜನೆಯ ಜವಾಬ್ದಾರಿಯನ್ನು ಹೊಂದಿದ್ದ ಆರೋಗ್ಯ ಇಲಾಖೆಯ ನಾಲ್ವರು ಎಂಜಿನಿಯರ್ಗಳ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.

2019ರಲ್ಲಿ ಯೋಜನೆ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಈ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭಿಸುವ ಪ್ರಮಾಣ ಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ ನೀಡಲಾಗಿರುವ ದಾಖಲೆಗಳಲ್ಲಿನ ಲೋಪ–ದೋಷಗಳನ್ನು ಪರಿಶೀಲಿಸಲು ನಗರಾಭಿವೃದ್ಧಿ ಇಲಾಖೆಗೆ ಶಾಲಿನಿ ರಜನೀಶ್ ಸೂಚಿಸಿದ್ದಾರೆ. ನಿರ್ಮಾಣ ತ್ಯಾಜ್ಯವನ್ನು ಹೇಗೆ ವಿಲೇವಾರಿ ಮಾಡಲಾಗಿದೆ ಎಂಬುದನ್ನು ಪರಿಶೀಲಿಸದೆ ಒಸಿ ಮತ್ತು ಸಿಸಿಯನ್ನು ಹೇಗೆ ನೀಡಲಾಯಿತು ಎಂಬ ಬಗ್ಗೆಯೂ ಪರಿಶೀಲನೆ ನಡೆಸಲು ಸೂಚಿಸಲಾಗಿದೆ.

‘200 ಮೀಟರ್ ಉದ್ದದ ಈ ಕಾಂಪೌಂಡ್ ಅನ್ನು ವೈಜ್ಞಾನಿಕವಾಗಿ ಮರು ನಿರ್ಮಾಣ ಮಾಡಬೇಕು. ಇಲ್ಲಿರುವ ಮಳೆನೀರು ಕಾಲುವೆಯನ್ನು ಸ್ವಚ್ಛಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-15-827743152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.