ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಕೊಲೆಯಾದ 13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಮೃತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಯಾವುದೇ ಲಕ್ಷಣಗಳು ಅಥವಾ ಪುರಾವೆಗಳು ಕಂಡುಬಂದಿಲ್ಲ ಎಂದು ತಿಳಿಸಿವೆ

ಜುಲೈ 30ರಂದು ಟ್ಯೂಷನ್ಗೆ ತೆರಳಿದ್ದ ನಿಶ್ಚಿತ್, ವಾಪಸ್ ಮನೆಗೆ ಬಂದಿರಲಿಲ್ಲ. ಜುಲೈ 31ರಂದು ಬಿಲ್ವಾರದಹಳ್ಳಿಯ ಅರಣ್ಯ ಪ್ರದೇಶದಲ್ಲಿ ಬಂಡೆಯ ಮೇಲೆ ಬಾಲಕನ ಮೃತದೇಹ ಪತ್ತೆಯಾಗಿತ್ತು.

ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕ ನಿಶ್ಚಿತ್ನನ್ನು(13) ದುಷ್ಕರ್ಮಿಗಳು ಅಪಹರಿಸಿ, ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಆಗಸ್ಟ್ 1ರಂದು ಆರೋಪಿಗಳಾದ ಗುರುಮೂರ್ತಿ, ಗೋಪಿಯನ್ನು ಪೊಲೀಸರು ಬಂಧಿಸಿದ್ದರು.

'ದುಷ್ಕರ್ಮಿಗಳು ಹಣಕ್ಕಾಗಿ ಬಾಲಕನ ಅಪಹರಿಸಿದ್ದರು. ಬಳಿಕ ತಮ್ಮ ಗುರುತು ಬಹಿರಂಗವಾಗುತ್ತದೆ ಎಂಬ ಕಾರಣಕ್ಕೆ ಕೊಲೆ ಮಾಡಿದರು’ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

‘ಪ್ರಮುಖ ಆರೋಪಿ ಗುರುಮೂರ್ತಿ ಎಂಬಾತ ನಿಶ್ಚಿತ್ ಅವರ ತಂದೆ ಅಚ್ಯುತ್ ಬಳಿ ಹೆಚ್ಚುವರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆಗಾಗ ಮನೆಗೆ ಬಂದು ಹೋಗುತ್ತಿದ್ದ ಗುರುಮೂರ್ತಿ, ನಿಶ್ಚಿತ್ನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಡುವ ಸಂಚು ರೂಪಿಸಿದ್ದ. ನಿಶ್ಚಿತ್ ತಾಯಿಯನ್ನು ಪರಿಚಯ ಮಾಡಿಕೊಂಡು, ಬಾಲಕನಿಗೂ ಹತ್ತಿರವಾಗಿದ್ದ. ಬಾಲಕನ ಕುಟುಂಬದ ಹಿನ್ನೆಲೆಯನ್ನು ತಿಳಿದು
ಕೊಂಡು ಹಣ ಗಳಿಸಲು ಸಂಚು ರೂಪಿಸಿದ್ದ. ಕೃತ್ಯ ಎಸಗಲು ತನ್ನ ಸ್ನೇಹಿತ ಗೋಪಿಯನ್ನೂ ಬಳಸಿಕೊಂಡಿದ್ದ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.