ಬೆಂಗಳೂರು: ರಾಷ್ಟ್ರೀಯ ಕಟ್ಟಡ ಸಂಹಿತೆ (ಎನ್ಬಿಸಿ) ನಿಯಮಗಳನ್ನು ಉಲ್ಲಂಘಿಸಿ, ಅತಿ ಎತ್ತರದ ಕಾಂಪೌಂಡ್ ನಿರ್ಮಿಸಿರುವ ವಸತಿ ಹಾಗೂ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಲು ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟುಮಾಡುವ ಶಿಥಿಲಾವಸ್ಥೆಯ ಹಾಗೂ ಅಪಾಯಕಾರಿ ಕಟ್ಟಡಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಬೇಕು. ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ರಸ್ತೆಗಳ ಸಮಗ್ರ ಅಭಿವೃದ್ಧಿ, ಮಳೆನೀರು ಕಾಲುವೆ ಹೂಳೆತ್ತುವುದು, ಜಂಕ್ಷನ್ ಅಭಿವೃದ್ಧಿ, ಕಟ್ಟಡಗಳ ಸುರಕ್ಷತೆ, ಸಕಾಲದಡಿ ಬರುವ ಅರ್ಜಿಗಳ ವಿಲೇವಾರಿ ಇತ್ಯಾದಿಗೆ ಸಂಬಂಧಿಸಿದ ಕಾರ್ಯಗಳ ಪ್ರಗತಿ ಪರಿಶೀಲಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಸಿವಿಲ್ ಕಾಮಗಾರಿ ಪೂರ್ಣಗೊಂಡಿರುವ ಪ್ಯಾಕೇಜುಗಳಲ್ಲಿನ ರಸ್ತೆಗಳನ್ನು ಜೂನ್ 9ರೊಳಗೆ ಡಾಂಬರೀಕರಣ ಮಾಡಬೇಕು. ಇನ್ನುಳಿದ ಕಾಮಗಾರಿ ಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸುವಂತೆ ಕಾರ್ಯಪಾಲಕ ಎಂಜಿನಿಯರ್ಗಳಿಗೆ ಸೂಚಿಸಿದರು.

ಕಾಂಕ್ರೀಟ್ ಮತ್ತು ಕಚ್ಚಾ ಮಳೆ ನೀರುಗಾಲುವೆಗಳ ಹೂಳು ತೆರವು ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿ ಸಬೇಕು. ಮಳೆ ನೀರು ನಿಲುಗಡೆ ಸಮಸ್ಯೆ ಉಂಟಾಗುತ್ತಿರುವ ಪ್ರದೇಶಗಳನ್ನು ಸಂಚಾರ ಪೊಲೀಸರು ಗುರುತಿಸಿದ್ದು, ಅಂತಹ ಕಡೆ ಆದ್ಯತೆ ಮೇಲೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕ್ರಿಯಾ ಯೋಜನೆ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಲಯಕ್ಕೆ ಒಂದರಂತೆ, ಎರಡು ವಾರ್ಡ್ಗಳಲ್ಲಿ ಪೌರ ಕಾರ್ಮಿಕರು, ಗ್ಯಾಂಗ್ ಮ್ಯಾನ್, ಆಟೊ ಟಿಪ್ಪರ್, ಸ್ವಚ್ಛತಾ ಕಾರ್ಮಿಕರನ್ನು ನೇಮಿಸಿಕೊಂಡು ಸಂಪೂರ್ಣ ವಾರ್ಡ್ ಅನ್ನು ಸ್ವಚ್ಛಗೊಳಿಸಬೇಕು. ಸರ್ಕಾರಿ ಕಟ್ಟಡಗಳಿಗೆ ಬಣ್ಣ ಬಳಿಯುವುದು ಸೇರಿದಂತೆ ಸಮಗ್ರ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-4-1913307455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.