ಬೆಂಗಳೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ(ಒಆರ್ಆರ್) ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬಿಎಂಆರ್ಸಿಎಲ್, ಪೊಲೀಸ್ ಇಲಾಖೆ, ಬಿಎಂಟಿಸಿ ಅಧಿಕಾರಿಗಳು, ಹೊರ ವರ್ತುಲ ರಸ್ತೆಯಲ್ಲಿರುವ ವಿವಿಧ ಕಂಪನಿಗಳ ಅಸೋಸಿಯೇಷನ್ ಪ್ರತಿನಿಧಿಗಳೊಂದಿಗೆ ಬುಧವಾರ ಸಭೆ ನಡೆಸಿದರು.

ಕಂಪನಿಗಳಿಗೆ ಕೆಲಸಕ್ಕೆ ಬರುವವರು ದ್ವಿಚಕ್ರ ವಾಹನ ಬಳಕೆಯನ್ನು ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಉತ್ತೇಜಿಸಲು ಕ್ರಮ ಕೈಗೊಳ್ಳಲು ಸಭೆ ನಿರ್ಧರಿಸಿತು. ಅಲ್ಲದೇ, ಹೊರ ವರ್ತುಲ ರಸ್ತೆಯಲ್ಲಿ ಹೊಸ ರೂಪದಲ್ಲಿ ಬಸ್ ಆದ್ಯತಾ ಪಥ ನಿರ್ಮಾಣ ಮಾಡುವುದರ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು. ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಈ ಸಭೆ ನಡೆಯಿತು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ ಮಾತನಾಡಿ, ‘ಬಸ್ ಆದ್ಯತಾ ಪಥವನ್ನು ಹೈ ಆಕ್ಯುಪೆನ್ಸಿ ವಾಹನ(ಎಚ್ಒವಿ) ಮಾರ್ಗಗಳಾಗಿ ಬದಲಾವಣೆ ಮಾಡಬಹುದು. ಆಗ, ಮೂರು ಮಂದಿಗಿಂತ ಹೆಚ್ಚು ಪ್ರಯಾಣಿಕ ರಿರುವ ವಾಹನಗಳೂ ಈ ಮಾರ್ಗವನ್ನು ಬಳಸಬಹುದಾಗಿದೆ’ ಎಂದು ಸಲಹೆ ನೀಡಿದರು.

‘ಹೊರವರ್ತುಲ ರಸ್ತೆಯಲ್ಲಿ ಬಸ್ ಆದ್ಯತಾ ಪಥವು ಯಶಸ್ವಿ ಆಗಿತ್ತು. ಅದೇ ಆಧಾರದಲ್ಲಿ ಎಚ್.ಒ.ವಿ ಮಾರ್ಗಗಳು ಈ ಪ್ರದೇಶಕ್ಕೆ ಪರಿಹಾರ ನೀಡಬಹುದು’ ಎಂದು ಸಂಚಾರ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ತಿಳಿಸಿದರು.

ಕೋವಿಡ್ ಲಾಕ್ಡೌನ್ಗೂ ಮೊದಲು ಬಸ್ ಆದ್ಯತಾ ಪಥಗಳು ಕಾರ್ಯ ನಿರ್ವಹಿಸುತ್ತಿದ್ದವು. ಆಗ ಬಸ್ಗಳು 15 ನಿಮಿಷ ಬೇಗ ತಲುಪು ತ್ತಿದ್ದವು. ಇಂಧನವೂ ಉಳಿತಾಯವಾ ಗುತ್ತಿತ್ತು. ಪ್ರಯಾಣಿಕರ ಸಂಖ್ಯೆಯಲ್ಲೂ ಶೇ 4ರಷ್ಟು ಏರಿಕೆ ಆಗಿತ್ತು ಎಂದು ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಜಿ.ಟಿ.ಪ್ರಭಾಕರ್ ರೆಡ್ಡಿ ಮಾಹಿತಿ ಹಂಚಿಕೊಂಡರು. ಪ್ರಸ್ತುತ ಹೊರ ವರ್ತುಲ ರಸ್ತೆಯಲ್ಲಿ ಬಿಎಂಟಿಸಿ ಬಸ್ಗಳು ನಾಲ್ಕು ಸಾವಿರ ಟ್ರಿಪ್ ಸಂಚರಿಸುತ್ತಿವೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಕೆ.ಬಿ.ಶಿವಕುಮಾರ್ ಮಾತನಾಡಿ, ಹೊರ ವರ್ತುಲ ರಸ್ತೆಯಲ್ಲಿ ಇರುವ ಕಂಪನಿಗಳಿಗೆ ವಿಶೇಷ ಬಸ್ ಸೇವೆ ಕಲ್ಪಿಸಲು ಬಿಎಂಟಿಸಿ ಸಂಪರ್ಕಿಸಬಹುದು ಎಂದು ಹೇಳಿದರು.

ಕೋವಿಡ್ಗೂ ಮುನ್ನ ಐ.ಟಿ ಪಾರ್ಕ್ಗಳಿಗೆ ಮೀಸಲಾದ ಬಸ್ ವ್ಯವಸ್ಥೆ ಯನ್ನು ಮತ್ತೆ ಆರಂಭಿಸುವಂತೆಯೂ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಜಿಬಿಎ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ಹೊರ ವರ್ತುಲ ರಸ್ತೆಯಲ್ಲಿ ಸುಧಾರಣೆ ತರಲು ಮತ್ತಷ್ಟು ಯೋಜನೆ ಜಾರಿಗೆ ತರಲಾಗುವುದು. ಮೂಲಸೌಕರ್ಯಗಳನ್ನೂ ಕಲ್ಪಿಸಲಾಗುವುದು ಎಂದು ಹೇಳಿದರು.

ಇಬ್ಲೂರ್ ಜಂಕ್ಷನ್ನ ಸಂಪೂರ್ಣ ಮರು ವಿನ್ಯಾಸ ಮಾಡಲು ಚಿಂತಿಸಲಾಗಿದೆ. ಅಲ್ಲದೇ ಇಬ್ಲೂರ್ ಜಂಕ್ಷನ್ನಲ್ಲಿ ಹೆಚ್ಚುವರಿ ಮೇಲ್ಸೇತುವೆ ಹಾಗೂ ಮಾರತ್ಹಳ್ಳಿಯ ರೇನ್ಬೊ ಆಸ್ಪತ್ರೆ ಬಳಿ ಮತ್ತೊಂದು ಮೇಲ್ಸೇತುವೆ ನಿರ್ಮಾಣಕ್ಕೂ ಚಿಂತಿಸಲಾಗಿದೆ ಎಂದು ಮಾಹಿತಿ ನೀಡಿದರು. ವಿವಿಧ ಐಟಿ ಕಂಪನಿಗಳ ಪ್ರತಿನಿಧಿಗಳು ತಮ್ಮ ಸಮಸ್ಯೆ ಗಳನ್ನು ಇದೇ ವೇಳೆ ಹೇಳಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-4-2001023287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.