ಬೆಂಗಳೂರು: ‘ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳು ಬಡ–ಮಧ್ಯಮ ವರ್ಗದವರ ಜೇಬಿಗೆ ಹೊರೆಯಾಗದಂತೆ ಚಿಕಿತ್ಸಾ ಸೌಲಭ್ಯ ಒದಗಿಸಬೇಕು’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟರು.

ಹೊಂಬೇಗೌಡನಗರದಲ್ಲಿ ನಿರ್ಮಾಣವಾಗಿರುವ ಎಆರ್ಸಿ ಕ್ಯಾನ್ಸರ್ ಆಸ್ಪತ್ರೆ ಭಾನುವಾರ ಕಾರ್ಯಾರಂಭ ಮಾಡಿತು. ಈ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಬದಲಾದ ಜೀವನಶೈಲಿ ಸೇರಿದಂತೆ ವಿವಿಧ ಕಾರಣಗಳಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇದೇ ಅವಧಿಯಲ್ಲಿ ಚಿಕಿತ್ಸಾ ಪದ್ಧತಿಯಲ್ಲಿಯೂ ಹೊಸ ಹೊಸ ಆವಿಷ್ಕಾರಗಳಾಗುತ್ತಿವೆ. ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಗಳು ಎಲ್ಲರಿಗೂ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಬಡ–ಮಧ್ಯಮ ವರ್ಗದವರಿಗೆ ಅಗತ್ಯ ಸೇವಾಸೌಲಭ್ಯ ಒದಗಿಸುವುದು ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳ ಗುರಿಯಾಗಬೇಕು. ಸೇವೆಯನ್ನೇ ಆದ್ಯತೆಯನ್ನಾಗಿಸಿಕೊಂಡಿರುವ ಖಾಸಗಿ ಆಸ್ಪತ್ರೆಗಳಿಗೂ ಸರ್ಕಾರ ನೆರವು ನೀಡಬೇಕು’ ಎಂದು ಹೇಳಿದರು.

ಎಆರ್ಸಿ ಕ್ಯಾನ್ಸರ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀಹರಿ ಶಾಪುರ್, ‘ಕ್ಯಾನ್ಸರ್ ಚಿಕಿತ್ಸೆಯಲ್ಲಿನ ಕಂದಕ ನಿವಾರಣೆಗೆ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುವುದು ಈ ಆಸ್ಪತ್ರೆಯ ಗುರಿಯಾಗಿದೆ. ಬಿಪಿಎಲ್ ಕುಟುಂಬದ ಸದಸ್ಯರು ಹಾಗೂ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲು ಕ್ರಮವಹಿಸಲಾಗುತ್ತದೆ’ ಎಂದರು.

ಆಸ್ಪತ್ರೆಯ ಅಧ್ಯಕ್ಷ ಡಾ.ದಿನೇಶ್ ಮಾವಿನಹಳ್ಳಿ, ವೈದ್ಯಕೀಯ ನಿರ್ದೇಶಕಿ ಡಾ.ಸಂಸ್ಕೃತಿ ಪಿ. ಮೂರ್ತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-4-1281593638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.