ಬೆಂಗಳೂರು: ದನದ ಕೊಟ್ಟಿಗೆಗೆ ಬೆಂಕಿ ಇಟ್ಟು ಐದು ಹಸುಗಳ ಸಜೀವ ದಹನಕ್ಕೆ ಕಾರಣನಾಗಿದ್ದ ಆರೋಪಿಯನ್ನು ಡಿ.ಜೆ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿ ನಿವಾಸಿ ಮೊಹಮ್ಮದ್ ಇಮ್ರಾನ್ (49) ಬಂಧಿತ.

ಶಾಂಪುರ ರಸ್ತೆಯಲ್ಲಿನ ಪ್ಲೈವುಡ್ ಅಂಗಡಿಯಲ್ಲಿ ಮಂಗಳವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಪಕ್ಕದಲ್ಲಿದ್ದ ಶ್ರೀನಿವಾಸ್ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಗೆ ವ್ಯಾಪಿಸಿದ ಪರಿಣಾಮ ಆರು ಹಸುಗಳು ಸಜೀವ ದಹನವಾಗಿದ್ದವು.

ಅಲ್ಲದೇ ಎರಡು ಪ್ಲೈವುಡ್ ಅಂಗಡಿಗಳು, ಟಾಟಾ ಏಸ್ ಮತ್ತು ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಹೋಗಿದ್ದವು. ಅಂದಾಜು ₹15.20 ಲಕ್ಷ ನಷ್ಟವಾಗಿತ್ತು. ಇದು ಬೆಂಕಿ ಅವಘಡ ಆಕಸ್ಮಿಕವಲ್ಲ, ಬದಲಾಗಿ ಕಿಡಿಗೇಡಿಗಳ ಕೃತ್ಯ ಎಂದು ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿ, ಮೊಹಮ್ಮದ್ ಬೆಂಕಿ ಹೆಚ್ಚಿ ಬಂದಿರುವ ದೃಶ್ಯ ಪಕ್ಕದ ಮಳಿಗೆಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ‘ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ನಾಯಿಗಳು ಅಟ್ಟಾಡಿಸಿದ್ದವು. ಅವುಗಳನ್ನು ಹೆದರಿಸಲು ರಸ್ತೆಯ ಬದಿಯಲ್ಲಿದ್ದ ಕಸಕ್ಕೆ ಬೆಂಕಿ ಹಚ್ಚಿದೆ. ಅದು ದನದ ಕೊಟ್ಟಿಗೆಗೆ ತಗುಲಿ ಹಸುಗಳು ಸುಟ್ಟು ಹೋಗಿದ್ದು, ಅವುಗಳನ್ನು ಕೊಲ್ಲುವ ಉದ್ದೇಶ ಇರಲಿಲ್ಲ’ ಎಂದು ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.