ಬೆಂಗಳೂರು: ಹೊಸ ವರ್ಷಾಚರಣೆಗಾಗಿ ಮಾದಕ ವಸ್ತು ಸಂಗ್ರಹ ಮಾಡಿದ್ದ ಪೆಡ್ಲರ್ಗಳ ಮೇಲೆ ದಾಳಿ ನಡೆಸಿದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ, ವಿದೇಶಿ ಪ್ರಜೆ ಸೇರಿ ಇಬ್ಬರನ್ನು ಬಂಧಿಸಿ, ₹2.50 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದೆ.

ನೈಜೀರಿಯಾದ ಓರಿಯಾ ಡಿಕಾಸ್ಟ್ (36) ಹಾಗೂ ತಮಿಳುನಾಡಿನ ನವೀನ್ರಾಜ್ (29) ಎಂಬುವವರನ್ನು ಬಂಧಿಸಲಾಗಿದೆ. ಓರಿಯಾ ಅವರಿಂದ 1.70 ಕೆ.ಜಿ. ಎಂಡಿಎಂಎ ಕ್ರಿಸ್ಟೆಲ್, 60 ಎಕ್ಸ್ಟೆಸಿ ಮಾತ್ರೆಗಳು, 100 ಎಲ್ಎಸ್ಡಿ ಸ್ಟ್ರಿಪ್ಸ್, 5 ಗ್ರಾಂ ಕೊಕೇನ್, 2 ಮೊಬೈಲ್ ಫೋನ್, 1 ಲ್ಯಾಪ್ಟಾಪ್, ₹2 ಲಕ್ಷ ನಗದು ಸೇರಿ ಒಟ್ಟು ₹2.25 ಕೋಟಿ ಮೌಲದ್ಯ ಸ್ವತ್ತು ಜಪ್ತಿ ಮಾಡಿದ್ದಾರೆ.

ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿರುವ ಓರಿಯಾ ಡಿಕಾಸ್ಟ್, ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಹೊಸ ವರ್ಷಕ್ಕೆ ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿದ್ದ ವಿವಿಧ ಮಾದರಿಯ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

‘ವಿಚಾರಣೆ ವೇಳೆ ಆರೋಪಿ ಪೆಡ್ಲರ್ ದೆಹಲಿ ಮತ್ತು ಮುಂಬೈನಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸಿ ಬೆಂಗಳೂರಿಗೆ ತಂದು ಪರಿಚಯಸ್ಥರಿಗೆ ಮಾರಾಟ ಮಾಡುತ್ತಿದ್ದ. ಈತನ ವಿರುದ್ಧ ಈ ಹಿಂದೆಯೂ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಅಡಿ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರಬಂದು ಮತ್ತೆ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದರು.

ಬಂಡೇಪಾಳ್ಯ:

ನಗರದಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡು ಮಾದಕ ವಸ್ತು ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುತ್ತಿದ್ದ ತಮಿಳುನಾಡಿನ ನವೀನ್ರಾಜ್ ಅವರಿಂದ 5 ಗ್ರಾಂ ಕೊಕೇನ್, 100 ಎಲ್ಎಸ್ಡಿ ಸ್ಟ್ರಿಪ್ಸ್, ಮೊಬೈಲ್ ವಶಪಡಿಸಿಕೊಂಡಿದ್ದು, ಇದರ ಮೌಲ್ಯ ₹25 ಲಕ್ಷ. ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.