ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಡದಿಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ

ಸಿಸಿಬಿಯ ಆರ್ಥಿಕ ಅಪರಾಧ ಪತ್ತೆದಳ ವಿಭಾಗದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ
Published : 5 ಆಗಸ್ಟ್ 2024, 6:22 IST
Last Updated : 5 ಆಗಸ್ಟ್ 2024, 6:22 IST
ಫಾಲೋ ಮಾಡಿ
Comments

ಬೆಂಗಳೂರು: ಸಿಸಿಬಿಯ ಆರ್ಥಿಕ ಅಪರಾಧ ಪತ್ತೆದಳ ವಿಭಾಗದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ ಅವರು ರಾಮನಗರ ಜಿಲ್ಲೆಯ ಬಿಡದಿಯ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ದೊರೆತಿದೆ.

ತಿಮ್ಮೇಗೌಡ ಅವರು ಒಂದು ತಿಂಗಳ ಹಿಂದೆಷ್ಟೇ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ರಾಮನಗರ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ತಿಮ್ಮೇಗೌಡ ಅವರ ಕುಟುಂಬಸ್ಥರು ಬಂದಿದ್ದಾರೆ. ಸ್ಥಳದಲ್ಲಿ ಸದ್ಯ ಯಾವುದೇ ಮರಣಪತ್ರ ದೊರೆತಿಲ್ಲ. ಲೋಕಾಯುಕ್ತದಲ್ಲಿ ತಿಮ್ಮೇಗೌಡ ಅವರ ವಿರುದ್ಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು.

ಅಲ್ಲದೇ ಅತ್ತಿಬೆಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು‌. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ಮಲಾಗಿದೆ. ತನಿಖೆ ನಡೆಯುತ್ತಿದೆ. ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT