ಬೆಂಗಳೂರು: ಸಿಸಿಬಿಯ ಸಂಘಟಿತ ಅಪರಾಧ ದಳದ ಪೊಲೀಸರು, ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಗಳನ್ನು ಬಂಧಿಸಿದ್ದಾರೆ.

ರೌಡಿಗಳಾದ ನವೀನ್ (38), ಮುತ್ತುರಾಜ್ (33) ಹಾಗೂ ತಬ್ರೇಜ್ ಪಾಷ (31) ಬಂಧಿತರು.

ವಿವಿಧ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ನವೀನ್ನನ್ನು ಈ ಹಿಂದೆ ಕೆಜಿಎಫ್ಗೆ ಗಡಿಪಾರು ಮಾಡಲಾಗಿತ್ತು. ಆದರೆ, ನವೀನ್ ಗಡಿಪಾರು ಆದೇಶ ಉಲ್ಲಂಘಿಸಿ, ನಗರಕ್ಕೆ ಮತ್ತೆ ವಾಪಸ್ ಬಂದಿದ್ದ. ತಮ್ಮ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಭಾಗಿಯಾಗಿದ್ದ. ನವೀನ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ಹೇಳಿವೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ರೌಡಿ ಮುತ್ತುರಾಜ್ ಹಾಗೂ ತಬ್ರೇಜ್ ಪಾಷನನ್ನು ಬಂಧಿಸಲಾಗಿದೆ.

ಮುತ್ತುರಾಜ್ ವಿರುದ್ಧ ಎರಡು ಕೊಲೆ, ನಾಲ್ಕು ಕೊಲೆ ಯತ್ನ ಪ್ರಕರಣಗಳೂ ಸೇರಿದಂತೆ ವಿವಿಧ ಠಾಣೆಗಳಲ್ಲಿ ಒಟ್ಟು 15 ಪ್ರಕರಣಗಳು ದಾಖಲಾಗಿವೆ. ತಬ್ರೇಜ್ ವಿರುದ್ಧ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-544027258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.