ಮಂಗಳವಾರ, ಮಾರ್ಚ್ 28, 2023
23 °C

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲೆ ಸಿಸಿಬಿ ದಿಢೀರ್ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ನಸುಕಿನಲ್ಲಿ ದಿಢೀರ್ ದಾಳಿ ಮಾಡಿದರು.

ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ. ಅಲ್ಲಿಂದಲೇ ಅಪರಾಧ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಹಾಗೂ ಮಾದಕ ವಸ್ತು ಸೇವಿಸುತ್ತಿದ್ದ ಮಾಹಿತಿ ಇತ್ತು.

ಅದೇ ಕಾರಣಕ್ಕೆ ಸಿಸಿಬಿ ವಿಶೇಷ ತಂಡಗಳು, ಜೈಲಿನೊಳಗೆ ದಾಳಿ ಮಾಡಿ ಎಲ್ಲ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಿದವು. ಮೊಬೈಲ್‌ಗಳು, ಸಿಮ್ ಕಾರ್ಡ್‌ಗಳು, ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳು ಕೈದಿಗಳ ಬಳಿ ಸಿಕ್ಕಿವೆ.

'ಹೊರಗಿನಿಂದ ಮಾದಕ ವಸ್ತು ಜೈಲಿನೊಳಗೆ ಪೂರೈಕೆ ಆಗುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಜೈಲು ಸಿಬ್ಬಂದಿಯನ್ನು ವಿಚಾರಣೆ ನಡೆಸಬೇಕಿದೆ' ಎಂದು ಸಿಸಿಬಿ ಮೂಲಗಳು ಹೇಳಿವೆ.

ರೌಡಿಗಳ‌ ಮನೆ ಮೇಲೂ ದಾಳಿ: ಬೆಂಗಳೂರಿನ ಹಲವು ರೌಡಿಗಳ‌ ಮನೆಗಳ‌‌ ಮೇಲೂ ಪೊಲೀಸರು ದಾಳಿ‌ ಮಾಡಿದ್ದಾರೆ. ಮಾರಕಾಸ್ತ್ರ ಹಾಗೂ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು