ಬೆಂಗಳೂರು: ವಾಯುವಿಹಾರ ಮಾಡುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ, 25 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಬಾಣಸವಾಡಿ ಠಾಣಾ ವ್ಯಾಪ್ತಿಯ ಎಚ್.ಆರ್.ಬಿ.ಆರ್. ಲೇಔಟ್ನಲ್ಲಿ ವಾಸವಿರುವ ಮಹಿಳೆ ಸಂಜೆ ವಾಯುವಿಹಾರ ಮಾಡುವ ವೇಳೆ ಮಾಸ್ಕ್ ಧರಿಸಿಕೊಂಡು ಬಂದ ವ್ಯಕ್ತಿ, ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ.

ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆರೋಪಿಯು ಸರ ಅಪಹರಣ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಕದ್ದ ಸರವನ್ನು ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಲಾಗಿತ್ತು. ಆರೋಪಿ ನೀಡಿದ ಮಾಹಿತಿ ಮೇರೆಗೆ ಖರೀದಿ ಮಾಡಿದ್ದ ವ್ಯಕ್ತಿಯಿಂದ ₹3.50 ಲಕ್ಷ ಮೌಲ್ಯದ 25 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-4-503372514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.