ಬೆಂಗಳೂರು: ಎರಡು ಪ್ರತ್ಯೇಕ ಸರ ಕಳವು ಪ್ರಕರಣಗಳಲ್ಲಿ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಖಗವಸು (ಮಾಸ್ಕ್) ಧರಿಸಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು ಮಾಡಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರ ನಿವಾಸಿ ಹರೀಶ್(32) ಬಂಧಿತ.

ಆರೋಪಿಯಂದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಏಪ್ರಿಲ್ 16ರಂದು ಠಾಣೆ ವ್ಯಾಪ್ತಿಯ ಎಚ್ಆರ್ಬಿಆರ್ ಲೇಔಟ್ನಲ್ಲಿ ಮಹಿಳೆಯೊಬ್ಬರು ವಾಯುವಿಹಾರ ಮಾಡುವಾಗ ಬೈಕ್ನಲ್ಲಿ ಬಂದ ಆರೋಪಿ ಚಿನ್ನದ ಸರ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮತ್ತೊಂದು ಪ್ರಕರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾಗಿದ್ದ ಆರೋಪಿ ನದೀಮ್ (34) ಹಾಗೂ ಆ ಸರವನ್ನು ತೆಗೆದುಕೊಂಡಿದ್ದ ಮಹಿಳೆಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ಪೈಕಿ ನದೀಮ್, ಮಾರ್ಚ್ 25ರಂದು ಕೆಂಗೇರಿ ಉಪನಗರ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಸಿದುಕೊಂಡು ಪರಾರಿಯಾಗಿದ್ದ. ಅದನ್ನು ಮಹಿಳೆಯೊಬ್ಬಳಿಗೆ ನೀಡಿ ವಿಲೇವಾರಿ ಮಾಡಿಸಿದ್ದ. ಹೀಗಾಗಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.