ಕೆಂಗೇರಿ: ನಾಗದೇವನಹಳ್ಳಿಯಲ್ಲಿರುವ ಚಿತ್ರಕೂಟ ಕೌಶಲ್ಯ ಶಾಲೆಯ 5ನೇ ಮಹಡಿಯಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ, ಪೀಠೋಪಕರಣ ಹಾಗೂ ಇತರೆ ವಸ್ತುಗಳು ಸುಟ್ಟು ಹೋಗಿವೆ.

ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿದೆ. ತಕ್ಷಣ ಶಾಲೆಯಲ್ಲಿದ್ದ ಮಕ್ಕಳು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ತಾಸು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಗೆ ಶಾರ್ಟ್ ಸರ್ಕಿಟ್ ಕಾರಣ ಎನ್ನಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದರು.

‘ಅಗ್ನಿ ಅವಘಡಕ್ಕೆ ಪ್ರಾಥಮಿಕ ಕಾರಣ ತಿಳಿದು ಬಂದಿಲ್ಲ. ಅಗ್ನಿ ಶಾಮಕ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ’ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣ ಅಧಿಕಾರಿ ರೇಖಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.