ಶುಕ್ರವಾರ, ಮಾರ್ಚ್ 24, 2023
22 °C

ಕಾಲೇಜು ಮಾನ್ಯತೆಗಾಗಿ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ 13 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಎಲ್ಲಾ ಕಾಲೇಜುಗಳ ಮಾನ್ಯತೆ ನವೀಕರಿಸಲು ಆನ್‌ಲೈನ್‌ ಅರ್ಜಿಗಳನ್ನು ಆಹ್ವಾನಿಸಿದೆ.

2021–22ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಕಾಲೇಜು ಆರಂಭಿಸಲು, ಹೆಚ್ಚುವರಿ ಕೋರ್ಸ್‌ ಅಥವಾ ಸ್ನಾತಕೋತ್ತರ ಕೋರ್ಸ್‌ ಪ್ರಾರಂಭಿಸಲು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು, ಶಾಶ್ವತ ಮಾನ್ಯತೆ ಪಡೆಯಲು, ಹೆಸರು ಮತ್ತು ಆಡಳಿತ ಬದಲಾವಣೆ, ಕಾಲೇಜುಗಳ ಸ್ಥಳಾಂತರ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗಾಗಿ www.onlineaffiliation.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಈ ತಿಂಗಳ 31ರೊಳಗೆ ದಂಡ ಶುಲ್ಕವಿಲ್ಲದೆ ಅರ್ಜಿಗಳನ್ನು ಹಾಕಬಹುದು. ₹1,000 ದಂಡ ಶುಲ್ಕದೊಂದಿಗೆ ಆಗಸ್ಟ್‌ 7ರವರೆಗೆ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಗಳ ಮೂರು ಕಚ್ಚಾ ಪ್ರತಿಗಳನ್ನು ಆಗಸ್ಟ್‌ 16ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು