ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ₹ 86.50 ಲಕ್ಷ ಮೌಲ್ಯದ ಕೊಕೇನ್ ಜಪ್ತಿ

Published 5 ಏಪ್ರಿಲ್ 2024, 19:08 IST
Last Updated 5 ಏಪ್ರಿಲ್ 2024, 19:08 IST
ಅಕ್ಷರ ಗಾತ್ರ

ಬೆಂಗಳೂರು: ದೇವನಹಳ್ಳಿ ಹಾಗೂ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ, ₹ 86.50 ಲಕ್ಷ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ.

‘ದೇವನಹಳ್ಳಿಯ ಪ್ರಸನ್ನಹಳ್ಳಿ ರಸ್ತೆಯಲ್ಲಿ ಇಬ್ಬರು ಆರೋಪಿಗಳು ಕೊಕೇನ್ ಮಾರುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ ₹ 80 ಲಕ್ಷ ಮೌಲ್ಯದ 850 ಗ್ರಾಂ ಕೊಕೇನ್, ಎರಡು ಮೊಬೈಲ್, ತೂಕದ ಯಂತ್ರ, ಬ್ಯಾಗ್ ಹಾಗೂ ಕೊಕೇನ್ ತುಂಬಲು ಬಳಸುವ ಪ್ಲ್ಯಾಸ್ಟಿಕ್ ಪೊಟ್ಟಣಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಇನ್ನೊಂದು ಪ್ರಕರಣದಲ್ಲಿ ತ್ಯಾಗರಾಜನಗರದ ಬಿಬಿಎಂಪಿ ಆಟದ ಮೈದಾನ ಬಳಿ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ. ಈತ, ಕಾಲೇಜು ವಿದ್ಯಾರ್ಥಿಗಳಿಗೆ ಕೊಕೇನ್ ಮಾರುತ್ತಿದ್ದನೆಂದು ಗೊತ್ತಾಗಿದೆ. ಆರೋಪಿಯಿಂದ ₹ 6.50 ಲಕ್ಷ ಮೌಲ್ಯದ 81 ಕೊಕೇನ್ ಹಾಗೂ ₹ 2,200 ನಗದು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT