ಬೆಂಗಳೂರು: ಜ್ಯೂಸ್ ಕುಡಿಯಲು ಸ್ನೇಹಿತರ ಜತೆಗೆ ಹೊರಟಿದ್ದ ವಿದ್ಯಾರ್ಥಿಗೆ ಮೂವರು ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ.

ಪಿಯುಸಿ ಓದುತ್ತಿರುವ ಕೆಂಚೇನಹಳ್ಳಿಯ 17 ವರ್ಷದ ಬಾಲಕ ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರ್.ಆರ್. ನಗರ ಠಾಣೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೇ 27ರ ರಾತ್ರಿ 9 ಗಂಟೆ ವೇಳೆಗೆ ಪಟ್ಟಣಗೆರೆಯ ಮುಖ್ಯರಸ್ತೆಯ ಪಲ್ಲವಿ ಢಾಬಾ ಬಳಿ ಕೃತ್ಯ ನಡೆದಿದೆ. ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಜ್ಯೂಸ್ ಕುಡಿಯಲು ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ವ್ಯಕ್ತಿಯ ಜತೆ ದಾರಿ ಬಿಡುವ ವಿಚಾರಕ್ಕೆ ಮಾತುಕತೆ ಆಗಿದೆ. ಅವರು ಅಲ್ಲಿಂದ ಹೊರಟು ಹೋಗುತ್ತಾರೆ. ಸ್ವಲ್ಪ ದೂರ ಹೋದ ಬಳಿಕ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಅಪರಿಚಿತರು ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಬೈಕ್ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ವಿದ್ಯಾರ್ಥಿಯು ಸ್ನೇಹಿತರ ಬೈಕ್ನಲ್ಲಿ ಆರೋಪಿಗಳನ್ನು ಹಿಂಬಾಲಿಸಿಕೊಂಡು ಹೋದಾಗ ರಾಕ್ಸ್ ಬಾರ್ ಬಳಿ ಜಗಳವಾಗಿದೆ. ಆಗ ಸ್ಥಳೀಯರು ಜಗಳ ಬಿಡಿಸಿ ಎಲ್ಲರನ್ನು ಕಳುಹಿಸಿದ್ದರು. ಅಲ್ಲಿಂದ ಪಟ್ಟಣಗೆರೆ ಮುಖ್ಯರಸ್ತೆಯಲ್ಲಿ ಆರೋಪಿಗಳು ಅಡ್ಡಗಟ್ಟಿ, ಚಾಕುವಿನಿಂದ ವಿದ್ಯಾರ್ಥಿಯ ಎದೆ, ಬೆನ್ನು, ತಲೆ ಹಾಗೂ ಕೈಗೆ ಇರಿದು ಪರಾರಿಯಾಗಿದ್ದಾರೆ.

ಯಾವ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ತನಿಖೆ ಮುಂದುವರಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.