ಶನಿವಾರ, ಜನವರಿ 29, 2022
19 °C

ಬೆಂಗಳೂರು ಟ್ರಾಫಿಕ್ ಜಂಟಿ ಕಮಿಷನರ್ ರವಿಕಾಂತೇಗೌಡ ಅವರ ಮನೆಗೆಲಸದ ಮಹಿಳೆ ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಈ ಬಗ್ಗೆ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಬಳ್ಳಾರಿಯ ಮಹಿಳೆಯೊಬ್ಬರು ರವಿಕಾಂತೇಗೌಡ ಮನೆಯಲ್ಲಿ ಕೆಲ ವರ್ಷಗಳಿಂದ ಕೆಲಸಕ್ಕಿದ್ದರು. ಯಾರಿಗೂ ಹೇಳದೇ ಅವರು ಸೋಮವಾರ ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಲ್ಲಿಕೆಯಾದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಹಿಳೆಯ ಕಾಯಂ ವಿಳಾಸ ಹಾಗೂ ಅವರ ಸಂಬಂಧಿಕರ ಮಾಹಿತಿ ಕಲೆ ಹಾಕಲಾಗಿದೆ. ಮಹಿಳೆ ಇರುವ ಜಾಗವನ್ನು ಪತ್ತೆ ಮಾಡಲಾಗಿದ್ದು, ಅವರನ್ನು ನಗರಕ್ಕೆ ಕರೆತಂದು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು