ಬೆಂಗಳೂರು: ಚಿಕ್ಕಬಾಣಸವಾಡಿಯಲ್ಲಿ ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಕಟ್ಟಡದ ಕಾಂಪೌಂಡ್ ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಪಂಚಮುಖಿ ಗ್ರಾಮದ ಭೀಮೇಶ್ (17) ಮೃತಪಟ್ಟವರು. ಗುಂಜಾಳ ಗ್ರಾಮದ ದೂಲಯ್ಯ (32) ಗಾಯಗೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಕಾಂಪೌಂಡ್ ಬಳಿ ಸಂಗ್ರಹವಾಗಿದ್ದ ಮಳೆನೀರು ಮತ್ತು ಮಣ್ಣಿನ ತೆರವು ಕಾರ್ಯದಲ್ಲಿ ಆರು ಕಾರ್ಮಿಕರು ಮಗ್ನರಾಗಿದ್ದರು. ಮಧ್ಯಾಹ್ನ 2ರ ಸುಮಾರಿಗೆ, ಕಾಂಪೌಂಡ್ ಇದ್ದಕ್ಕಿದ್ದಂತೆಯೇ ಕಾರ್ಮಿಕರ ಮೇಲೆ ಕುಸಿದು ಬಿದ್ದಿದೆ. ನಾಲ್ವರು ಸ್ಥಳದಿಂದ ಓಡಿಹೋಗಿ ಪಾರಾಗಿದ್ದಾರೆ. ಇಬ್ಬರು ಅವಶೇಷಗಳಡಿ ಸಿಲುಕಿದ್ದರು. ಭೀಮೇಶ್ ಹೊರಕ್ಕೆ ಬರಲು ಸಾಧ್ಯವಾಗದೇ ಗಂಭೀರವಾಗಿ ಗಾಯಗೊಂಡಿದ್ದರು. ಅವಶೇಷಗಳನ್ನು ತೆರವುಗೊಳಿಸಿ, ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲಿ ಭೀಮೇಶ್ ಮೃತಪಟ್ಟರು ಎಂದು ಮೂಲಗಳು ಹೇಳಿವೆ.

ಕಳಪೆ ಕಾಮಗಾರಿ ಹಾಗೂ ಕಟ್ಟಡ ಮಾಲೀಕರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ಮಾಲೀಕರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-4-1380203437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.