ಬೆಂಗಳೂರು: ಟೀ ಮತ್ತು ಸಿಗರೇಟ್ ತೆಗೆದುಕೊಂಡಿದ್ದಕ್ಕೆ ಹಣ ಕೇಳಿದ ಕಾಂಡಿಮೆಂಟ್ಸ್ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಮವಾರ ಬೆಳಗಿನ ಜಾವ ಬಿಎಚ್ಇಎಲ್ ಎದುರುಗಡೆ ಇರುವ ಕಾಂಡಿಮೆಂಟ್ಸ್ವೊಂದರಲ್ಲಿ ಆರೋಪಿಗಳು ಟೀ ಮತ್ತು ಸಿಗರೇಟ್ ತೆಗೆದುಕೊಂಡಿದ್ದಾರೆ. ಅಂಗಡಿ ಮಾಲೀಕ ಪ್ರದೀಪ್ ಅವರು ಹಣ ನೀಡುವಂತೆ ಕೇಳುತ್ತಿದಂತೆ ಅವರ ಮೇಲೆ ಹಲ್ಲೆ ನಡೆಸಿ, ಬಾಟಲಿಗಳನ್ನು ಒಡೆದು ಹಾಕಿ ಗಲಾಟೆ ಮಾಡಿದ್ದಾರೆ.

ಪೊಲೀಸರಿಗೆ ದೂರು ನೀಡದಂತೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹಲ್ಲೆಯ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-4-534092428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.