ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಿರುವ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಬೇಕು ಎಂದು ಅಖಿಲ ಭಾರತ ಕ್ರೈಸ್ತ ಮಹಾಸಭಾ ಆಗ್ರಹಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಪ್ರಜ್ವಲ್ಸ್ವಾಮಿ ಎಸ್., ‘ಮತಾಂತರ ನಿಷೇಧ ಕಾಯ್ದೆಯಿಂದ ಸಮಾಜದಲ್ಲಿನ ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡು ಕ್ರೈಸ್ತರ ಪ್ರಾರ್ಥನಾ ಸಭೆಗಳು, ಪಾದ್ರಿಗಳ ಮೇಲೆ ದಾಳಿ ಮಾಡಿ, ಕಿರುಕುಳ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.

‘ಮಹಿಳೆಯರು, ದಲಿತರು ಮತ್ತು ಆದಿವಾಸಿ ಕ್ರೈಸ್ತರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯದೇ ಮೌನ ವಹಿಸಿರುವುದು ಖಂಡನೀಯ. ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ರಕ್ಷಿಸಿ, ಎಲ್ಲ ಸಮುದಾಯಗಳಿಗೆ ಸಮಾನ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-721845910

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.