ಭಾನುವಾರ, ಸೆಪ್ಟೆಂಬರ್ 20, 2020
21 °C
ಕೊರೊನಾ ಸೋಂಕಿತರ ಸಂಖ್ಯೆ 84 ಸಾವಿರಕ್ಕೆ ಏರಿಕೆ

ಬೆಂಗಳೂರು: ಕೋವಿಡ್‌ ಗುಣಮುಖರ ಸಂಖ್ಯೆ 50 ಸಾವಿರದತ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರಲ್ಲಿ ಮತ್ತೆ 2,146 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 50 ಸಾವಿರದತ್ತ (49,392) ದಾಪುಗಾಲು ಇರಿಸಿದೆ. 

ಈ ತಿಂಗಳು ಕೇವಲ 14 ದಿನಗಳಲ್ಲಿ 32,496 ಮಂದಿ ಗುಣಮುಖರಾಗಿದ್ದಾರೆ. ಪ್ರತಿನಿತ್ಯ ಸರಾಸರಿ 2,321 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹೀಗಾಗಿ ಶನಿವಾರ ಗುಣಮುಖರ ಸಂಖ್ಯೆ 50 ಸಾವಿರದ ಗಡಿ ದಾಟುವ ಸಾಧ್ಯತೆ ಇದೆ.

ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಿದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕೂಡ ಬೆಳಕಿಗೆ ಬರುತ್ತಿವೆ.

ಗುರುವಾರ 2,452 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 84 ಸಾವಿರ ದಾಟಿದೆ.  ಮತ್ತೆ 22 ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 1,360ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು