ಬೆಂಗಳೂರು: ‘ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರು ಸರ್ಕಾರಿ ಸೇವಕರಲ್ಲ. ಖಾಸಗಿ ವ್ಯಕ್ತಿಗಳು. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿಲ್ಲ ಹಾಗೂ ಲಂಚದ ಹಣ ವಶಕ್ಕೆ ಪಡೆದುಕೊಂಡಿಲ್ಲ... ಎಂಬೆಲ್ಲಾ ಕಾರಣಗಳಿಗಾಗಿ ಭ್ರಷ್ಟಾಚಾರ ಪ್ರಕರಣದ ತನಿಖೆ ರದ್ದುಪಡಿಸಲು ಆಗುವುದಿಲ್ಲ’ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಸ್ಪಷ್ಟಪಡಿಸಿದೆ.

‘ನನ್ನ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣ ರದ್ದುಪಡಿಸ ಬೇಕು’ ಎಂದು ಕೋರಿ ಬಸವೇಶ್ವರ ನಗರದ ಕೆ.ಎಸ್. ಗಂಗಾಧರಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಈ ಪ್ರಕರಣದಲ್ಲಿ ಅರ್ಜಿದಾರರು ದಿ ಟ್ರಾನ್ಸ್ ಪೋರ್ಟ್ ಎಂಬ ಕಂಪನಿ ನಡೆಸುತ್ತಿದ್ದಾರೆ. ಸರ್ಕಾರಿ ನೌಕರನಿಗೆ ಹಣ ತಲುಪಿಸುವ ಜವಾಬ್ದಾರಿಯನ್ನು ಮತ್ತೊಬ್ಬರಿಗೆ ವಹಿಸಿಕೊಟ್ಟಿದ್ದಾರೆ. ಈ ಮೂಲಕ ಭ್ರಷ್ಟಾಚಾರದ ಜಾಲವಾಗಿ ಕಾರ್ಯ ನಿರ್ವಹಿಸಿದ್ದಾರೆ’ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣ: ಅಧಿಕಾರಿಗಳಿಗೆ ನೀಡಬೇಕಾದ ಲಂಚದ ಹಣವನ್ನು ಸಂಗ್ರಹಿಸಿ ಮತ್ತೊಬ್ಬರಿಗೆ ತಲುಪಿಸುವಂತೆ ನಿರ್ದೇಶನ ನೀಡಿದ್ದ ಆರೋಪವನ್ನು ಅರ್ಜಿದಾರರು ಎದುರಿಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-4-1247823685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.